".

Header Ads

ಮುಂಬೈ :- ರಾಯಗಡದಲ್ಲಿ ಭೂಕುಸಿತ, 4ಮಂದಿ ಮೃತ್ಯು, 21ಮಂದಿ ರಕ್ಷಣೆ

 


ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಭಾರಿ ಮಳೆಗೆ ಮಹಾರಾಷ್ಟ್ರದ ರಾಯಗಢದಲ್ಲಿ ಬುಧವಾರ ತಡರಾತ್ರಿ ಸಂಭವಿಸಿದ ಭೂಕುಸಿತದಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. 75 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಇನ್ನೂ ಹಲವರು ಮಣ್ಣಿನಡಿ ಸಿಲುಕಿರುವ ವರದಿಯಾಗಿದೆ.ಭೂಕುಸಿತದಿಂದ 30ಕ್ಕೂ ಹೆಚ್ಚು ಕುಟುಂಬಗಳು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬುಡಕಟ್ಟು ಜನಾಂಗದ ಹಲವಾರು ಮನೆಗಳು ಇರುವ ಖಲಾಪುರ ಬಳಿ ಈ ಘಟನೆ ನಡೆದಿದ್ದು. ಇಲ್ಲಿಯವರೆಗೆ 25 ಜನರನ್ನು ಸ್ಥಳಾಂತರಿಸಲಾಗಿದ್ದು, ಅದರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಉಳಿದ 21 ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ

ಘಟನಾ ಸ್ಥಳಕ್ಕೆ ರಕ್ಷಣಾ ತಂಡ ಧಾವಿಸಿದ್ದು ಮಣ್ಣಿನಡಿ ಸಿಲುಕಿದ ನಾಲ್ವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನೂ ಹಲವರು ಸಿಲುಕಿರುವವರ ರಕ್ಷಣೆ ಕಾರ್ಯ ನಡೆಯುತ್ತಿದೆ.ಶೋಧ ಕಾರ್ಯಗಳು ನಡೆಯುತ್ತಿದ್ದು, ಇದುವರೆಗೆ 75 ಜನರನ್ನು ರಕ್ಷಿಸಲಾಗಿದೆ ಎಂದು ಕೈಗಾರಿಕಾ ಸಚಿವ ಉದಯ್ ಸಾಮಂತ್ ತಿಳಿಸಿದ್ದಾರೆ.

 

 

Powered by Blogger.