".

Header Ads

ಕಾರ್ಕಳ:- ವಿಷ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ


 ಕಾರ್ಕಳ ತಾಲೂಕಿನ ಸಾಣೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ನಡೆದಿದೆ.

ಸ್ಥಳೀಯ ನಿವಾಸಿ ರವಿ ಶೆಟ್ಟಿ (55) ಆತ್ಮಹತ್ಯೆ ಮಾಡಿಕೊಂಡವರು. ನಿನ್ನೆ ಸಂಜೆ ಮನೆಯಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಇವರನ್ನು ಮನೆಯವರು ಚಿಕಿತ್ಸೆಗಾಗಿ ಕಾರ್ಕಳದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ರವಿ ಶೆಟ್ಟಿ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ, ಅದರಂತೆ ರವಿ ಶೆಟ್ಟಿ ಅವರಿಗೆ ಮದ್ಯಪಾನ ಮಾಡುವ ಅಭ್ಯಾಸ ಇದ್ದು ಅದೇ ಕಾರಣದಿಂದ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೃತರ ಮಗ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Powered by Blogger.