".

Header Ads

ದೇವಾಲಯಗಳಲ್ಲಿ ಫೋಟೊ ಕ್ಲಿಕ್ಕಿಸುವುದಕ್ಕೆ ನಿಷೇಧ – ಸರಕಾರದಿಂದ ಆದೇಶ

 


ದೇವಾಲಯಗಳಿಗೆ ತೆರಳಿ ಪೋಟೋ ಕ್ಲಿಕ್ಕಿಸಲೆಂದೇ ತೆರಳುವವರಿಗೆ ರಾಜ್ಯ ಸರ್ಕಾರ ಶಾಕಿಂಗ್​ ನ್ಯೂಸ್​ ನೀಡಿದೆ.
ಕರ್ನಾಟಕದ ದೇಗುಲಗಳಲ್ಲಿ ಮೊಬೈಲ್​ ಬಳಕೆಗೆ ನಿಷೇಧ ಹೇರಿ ನೂತನ ಆದೇಶ ಹೊರಡಿಸಿದೆ.

ಇಂದು ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಈ ಆದೇಶವನ್ನು ಹೊರಡಿಸಿದ್ದು ದತ್ತಿ ಇಲಾಖೆಗಳ ಅಡಿಯಲ್ಲಿ ಬರುವ ಯಾವುದೇ ದೇಗುಲಗಳಲ್ಲಿ ಇನ್ಮೇಲೆ ಮೊಬೈಲ್​ ಬಳಕೆ ಮಾಡುವಂತಿಲ್ಲ ಎಂದು ತನ್ನ ಆದೇಶದಲ್ಲಿ ತಿಳಿಸಿದೆ.

ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ರಾಜ್ಯ ಸರ್ಕಾರ 30 ಸಾವಿರಕ್ಕೂ ಅಧಿಕ ದೇವಾಲಯಗಳು ಇರುತ್ತದೆ. ಈಗಾಗಲೇ ದತ್ತಿ ಇಲಾಖೆಗಳ ವ್ಯಾಪ್ತಿಯಲ್ಲಿ ಬರುವ ದೇಗುಲಗಳಿಗೆ ಮೊಬೈಲ್​ ಬಳಕೆ ಮಾಡದಂತೆ ಫಲಕಗಳನ್ನು ಅಳವಡಿಸಲಾಗಿದೆಯಾದರೂ ಸಹ ಅದನ್ನು ಯಾರೂ ಪಾಲಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನದ ಸಮಯದಲ್ಲಿ ತಮ್ಮ ಮೊಬೈಲ್ ಫೋನ್ಗಳನ್ನು ಸ್ವಿಚ್ ಆಫ್ ಮಾಡಿ, ದೇವರ ದರ್ಶನ ಮಾಡುವಂತೆ ಸೂಚಿಸಲಾಗಿದೆ ಎಂದು ಕಂದಾಯ ಇಲಾಖೆ (ಧಾರ್ಮಿಕ ದತ್ತಿ) ಅಧೀನ ಕಾರ್ಯದರ್ಶಿ ಕೆ.ಪಿ. ಹೇಮಂತರಾಜು ಆದೇಶ ಹೊರಡಿಸಿದ್ದಾರೆ.

Powered by Blogger.