".

Header Ads

ಸೌಜನ್ಯ ಪ್ರಕರಣ : ಅತ್ಯಾಚಾರ ಮತ್ತು ಕೊಲೆ ಮಾಡಿದ ನೈಜ ಆರೋಪಿ ಶಿಕ್ಷೆ ನೀಡಬೇಕು, ಅಣ್ಣಪ್ಪ ಸ್ವಾಮಿ ಬೆಟ್ಟ ಬಳಿ ಸಾಮೂಹಿಕ ಪ್ರಾರ್ಥನೆ

 


ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸೌಜನ್ಯ ಅತ್ಯಾಚಾರ ಪ್ರಕರಣ ಮುಂದಿಟ್ಟು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಅವಹೇಳನ ಮಾಡಲಾಗುತ್ತಿದೆ ಎಂದು ಶ್ರೀ ಕ್ಷೇತ್ರದ ಭಕ್ತರು ಮತ್ತು ಸ್ಥಳೀಯರು ದೇವರ ಎದುರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ.

ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಮತ್ತು ಅಣ್ಣಪ್ಪ ಬೆಟ್ಟದ ಮುಂಭಾಗದಲ್ಲಿ ಭಕ್ತರು ಅವಹೇಳನ ನಡೆಸುವವರಿಗೆ ಶಿಕ್ಷೆ ನೀಡುವಂತೆ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ.

ಮೊದಲು ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಪ್ರಾರ್ಥನೆ ಸಲ್ಲಿಸಿದ ಭಕ್ತರು, ಕೋರ್ಟ್‌ನಲ್ಲೂ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಕ್ಕಿಲ್ಲ. ಕೊಲೆ ವಿಚಾರವಾಗಿ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಲಾಗುತ್ತಿದೆ. ವೀರೇಂದ್ರ ಹೆಗ್ಗಡೆಯವರ ಬಗ್ಗೆ ಹೀನವಾಗಿ ಮಾತನಾಡುತ್ತಿದ್ದಾರೆ.

ಸೌಜನ್ಯನ ಅತ್ಯಾಚಾರ ಮತ್ತು ಕೊಲೆ ಮಾಡಿದ ನೈಜ ಆರೋಪಿಗಳನ್ನು ಆದಷ್ಟು ಬೇಗ ಪತ್ತೆ ಹಚ್ಚಬೇಕು. ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಮಾತನಾಡುವವರಿಗೆ ಶಿಕ್ಷೆ ನೀಡಬೇಕು. ಮೊದಲು ಸದ್ಭುದ್ಧಿ ನೀಡು, ಬಳಿಕ ಶಿಕ್ಷೆಯೇ ನೀಡು ಎಂದು ನೂರಾರು ಮಂದಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ ಬಳಿಕ ಅಣ್ಣಪ್ಪ ಸ್ವಾಮಿ ಬೆಟ್ಟ ಬಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗಿದೆ. ಪ್ರಾರ್ಥನೆ ಸಲ್ಲಿಸಿ ಬೆಟ್ಟದ ಕೆಳಗೆ ಹೆಗ್ಗಡೆ ಅನುಯಾಯಿಗಳಯ ತೆಂಗಿನಕಾಯಿ ಒಡೆದಿದ್ದಾರೆ.

Powered by Blogger.