ಬೈಲೂರು:- ಖಾಸಗಿ ಬಸ್ ಮತ್ತು ಟಿಪ್ಪರ್ ಮುಖಾಮುಖಿ ಡಿಕ್ಕಿ-ಬಸ್ ಚಾಲಕ ಸೇರಿ ಪ್ರಯಾಣಿಕರಿಗೆ ಗಾಯ..!!
ಖಾಸಗಿ ಬಸ್ ಮತ್ತು ಟಿಪ್ಪರ್ ಮುಖಾಮುಖಿ ಡಿಕ್ಕಿಯಾದ ಘಟನೆ ಸೋಮವಾರ ಬೆಳಿಗ್ಗೆ ಬೈಲೂರು ಬಸ್ರಿ ಶಾಲೆಯ ಮುಂಭಾಗ ಸಂಭವಿಸಿದೆ.
ಉಡುಪಿಯಿಂದ ಕಾರ್ಕಳಕ್ಕೆ ಬರುತ್ತಿದ್ದ ಬಿಎಂಎಸ್ ಬಸ್ ಮತ್ತು ಕಾರ್ಕಳದಿಂದ ಬೈಲೂರಿಗೆ ಸಾಗುತ್ತಿದ್ದ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿದ ಪರಿಣಾಮವಾಗಿ ಬಸ್ ಚಾಲಕ ಮತ್ತು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಖಾಸಗಿ ಬಸ್ ಸರಕಾರಿ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಗೆ ಢಿಕ್ಕಿ ಹೊಡೆದಿದೆ.
ಇದರಿಂದ ಬಸ್ಸಿನ ಮುಂಭಾಗ ತೀವ್ರ ಜಖಂಗೊಂಡಿದ್ದು, ಬಸ್ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನ ಪ್ರಯಾಣಿಕರು ಹಾಗೂ ಟಿಪ್ಪರ್ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಕಾರ್ಕಳ ನಗರ ಠಾಣೆ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.


Post a Comment