".

Header Ads

'ಆನ್ ಲೈನ್' ನಲ್ಲಿ ಲೋನ್ : ಟಾರ್ಚರ್ ತಾಳಲಾರದೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ


ಆನ್ ಲೈನ್ ನಲ್ಲಿ ಸುಲಭವಾಗಿ ಲೋನ್ ಸಿಗುತ್ತೆ ಅಂತ ಲೋನ್ ತಗೊಳ್ಳುವರು ತಪ್ಪದೇ ಸುದ್ದಿ ಓದಿ. ಆನ್ ಲೈನ್ ನಲ್ಲಿ ಸಾಲ ಪಡೆದ ವಿದ್ಯಾರ್ಥಿ ಟಾರ್ಚರ್ ತಾಳಲಾರದೇ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ತೇಜಸ್ ಎಂದು ಗುರುತಿಸಲಾಗಿದೆ.

ಈತ ಸ್ನೇಹಿತ ಮಹೇಶ್ಗಾಗಿ ಸ್ಲೈಲ್ಸ್ ಪೇ, ಕಿಸಾತ್ ಹಾಗೂ ಕೋಟಕ್ ಮಹೀಂದ್ರಾ ಮೂಲಕ ಲೋನ್ ಪಡೆದಿದ್ದನು. ಆದರೆ ಕಳೆದ 1 ವರ್ಷದಿಂದ ಸ್ನೇಹಿತ ಮಹೇಶ್ ಸಾಲದ ಇಎಂಐ ಕಟ್ಟಿರಲಿಲ್ಲ. ಈ ಹಿನ್ನೆಲೆಯಲ್ಲಿ ಲೋನ್ ನೀಡಿದವರು ತೇಜಸ್ ಗೆ ಟಾರ್ಚರ್ ನೀಡಿದ್ದು, ಇದರಿಂದ ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನನ್ನ ತಪ್ಪಿಗೆ ಬೇರೆ ದಾರಿಯಿಲ್ಲ , ಸಾಲ ತೀರಿಸಲು ಆಗುವುದಿಲ್ಲ, ಅಪ್ಪ ಅಮ್ಮ ನನ್ನನ್ನ ಕ್ಷಮಿಸಿ., ಇದು ನನ್ನ ಕೊನೆ ತೀರ್ಮಾನ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Powered by Blogger.