".

Header Ads

ಧರ್ಮಸ್ಥಳದಲ್ಲಿ ಅಕ್ರಮ ದನ-ಕರುಗಳ ಸಾಗಾಟ ಮಾಡುತ್ತಿದ್ದ ನಾಲ್ವರ ಬಂಧನ

 

ದನ-ಕರುಗಳನ್ನು ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ಅಕ್ರಮ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

 ಬಂಧಿತರಿಂದ ಸಾಗಾಟಕ್ಕೆ ಬಳಸಿದ ಮೂರು ವಾಹನಗಳು, 6 ದನ ಮತ್ತು 2 ಗಂಡು ಕರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

 

ಈ ವೇಳೆ ಪೊಲೀಸರು ವಾಹನದಲ್ಲಿದ್ದವರನ್ನು ವಿಚಾರಿಸಿದಾಗ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವಾಹನ ಸಹಿತ ಜಾನುವಾರುಗಳನ್ನು ವಶಪಡಿಸಿಕೊಂಡು, ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

 

Powered by Blogger.