".

Header Ads

ಸಿದ್ದರಾಮಯ್ಯ ಕುಟುಂಬದ ವಿರುದ್ಧ ಟ್ವೀಟ್; ಬಿಜೆಪಿ ಕಾರ್ಯಕರ್ತೆ ಬಂಧನ, ಜಾಮೀನಿನ ಮೇಲೆ ಬಿಡುಗಡೆ


 ಉಡುಪಿ ಕಾಲೇಜು ವಾಶ್ ರೂಂನಲ್ಲಿ ವಿಡಿಯೋ ರೆಕಾರ್ಡ್ ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ್ದ ತುಮಕೂರು ಮೂಲದ ಬಿಜೆಪಿ ಕಾರ್ಯಕರ್ತೆಯನ್ನು ಶುಕ್ರವಾರ ಬಂಧಿಸಲಾಗಿದ್ದು, ಕೆಲವೇ ಗಂಟೆಗಳ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.ಶಕುಂತಲಾ ಎಚ್‌ಎಸ್ ಎಂಬುವವರು ಉಡುಪಿ ಘಟನೆಯ ಬಗ್ಗೆ ಕಾಂಗ್ರೆಸ್ ಪಕ್ಷದ ನಿಲುವನ್ನು ಟೀಕಿಸುವ ಭರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಬಗ್ಗೆ ನಿಂದನೀಯವಾಗಿ ಟ್ವೀಟ್ ಮಾಡಿದ್ದರು. ಕರ್ನಾಟಕ ಕಾಂಗ್ರೆಸ್‌ನ ಅಧಿಕೃತ ಹ್ಯಾಂಡಲ್‌ನ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ಅವರು ಟ್ವೀಟ್ ಮಾಡಿದ್ದರು.

Powered by Blogger.