ವಿಟ್ಲ: ಮನೆ ಮೇಲೆ ಬಿದ್ದ ಪಿಕಪ್, ಮಹಿಳೆ ಸ್ಥಿತಿ ಗಂಭೀರ
ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ. ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ಬಿದ್ದಿದೆ. ಇದರಿಂದ ಮನೆ ಸಂಪೂರ್ಣ ಹಾನಿಯಾಗಿದೆ. ಘಟನೆಯ ವೇಳೆ ಮನೆಯೊಳಗೆ ಮಹಿಳೆ ಮಲಗಿದ್ದರು ಎನ್ನಲಾಗಿದ್ದು, ಗಂಭೀರ ಪರಿಸ್ಥಿಯಲಿದ್ದಾರೆ ಎಂದು ತಿಳಿದು ಬಂದಿದೆ. ವಾಹನವನ್ನು ತೆರವು ಮಾಡದೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದ್ದು, ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
Post a Comment