ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಉಡುಪಿಗೆ
ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಉಡುಪಿ ನಗರ ಮಂಡಲದ ಸಭೆಯಲ್ಲಿ ಭಾಗವಹಿಸಿ, 'ಮಹಾ ಸಂಪರ್ಕ ಅಭಿಯಾನ'ದ ಕರ ಪತ್ರವನ್ನು ಬಿಡುಗಡೆಗೊಳಿಸಿದರು.
ಬಿಜೆಪಿ ಕಾರ್ಯಕರ್ತ ಆಧಾರಿತ ರಾಜಕೀಯ ಪಕ್ಷ. ಕಾರ್ಯಕರ್ತರೇ ಪಕ್ಷದ ಜೀವಾಳ. ಯಾವುದೇ ವೈಪರೀತ್ಯಗಳ ನಡುವೆಯೂ ಪಕ್ಷ ನೀಡುವ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕತೆಯಿಂದ ನಿಭಾಯಿಸುವ ಕಾರ್ಯಕ್ಷಮತೆ ಮತ್ತು ಸಾಮರ್ಥ್ಯ ಪಕ್ಷದ ಕಾರ್ಯಕರ್ತರಲ್ಲಿದೆ. ಈ ಹಿನ್ನೆಲೆಯಲ್ಲಿ ಪ್ರತೀ ಬೂತ್ ಮಟ್ಟದಲ್ಲಿ ಸದೃಢ ಪಕ್ಷ ಸಂಘಟನೆಯ ಮೂಲಕ ಮುಂಬರಲಿರುವ ತಾ.ಪಂ., ಜಿ.ಪಂ. ಹಾಗೂ ಲೋಕಸಭಾ ಚುನಾವಣೆಯಲ್ಲಿ ಮಗದೊಮ್ಮೆ ಉಡುಪಿ ಜಿಲ್ಲೆ ನಿರಂತರ ಗೆಲುವಿನ ಜಿಲ್ಲೆ ಎಂಬ ಹೆಗ್ಗಳಿಕೆಯನ್ನು ಉಳಿಸಿ ಬೆಳೆಸುವಲ್ಲಿ ಎಲ್ಲರೂ ಸಂಘಟಿತರಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಜಿಲ್ಲೆಯಲ್ಲಿ ನಿರಂತರ ಗೆಲುವಿನ ಛಾಪು ಮೂಡಿಸಿರುವ ಬಿಜೆಪಿ ಕಾರ್ಯಕರ್ತರು ರಾಜ್ಯಕ್ಕೇ ಮಾದರಿ. ಜಿಲ್ಲೆಯಲ್ಲಿ ಬಿಜೆಪಿ ವಿಜಯ ಯಾತ್ರೆಯನ್ನು ಮುಂದುವರಿಸಲು ಕೈಜೋಡಿಸಿರುವ ಎಲ್ಲರಿಗೂ ಅಭಿನಂದನೆಗಳು.
ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಮಾತನಾಡಿ ಮಹಾ ಸಂಪರ್ಕ ಅಭಿಯಾನದಡಿ ಮನೆ ಮನೆ ಸಂಪರ್ಕ ಸಹಿತ ಪಕ್ಷ ನೀಡಿರುವ ಎಲ್ಲ ಚಟುವಟಿಕೆಗಳನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸುವ ಜೊತೆಗೆ ಮುಂದಿನ ಎಲ್ಲ ಚುನಾವಣೆಗಳಲ್ಲಿ ಪಕ್ಷದ ಭರ್ಜರಿ ಗೆಲುವಿಗೆ ಸಂಘಟಿತರಾಗಿ ಶ್ರಮಿಸೋಣ ಎಂದರು.
ಜು.14ರಂದು ಬೆಳಿಗ್ಗೆ 11.00 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆ ಮತ್ತು ಪ್ರಬುದ್ಧರ ಗೋಷ್ಠಿಯನ್ನುದ್ದೇಶಿಸಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಮಾತನಾಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದರು.ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್ ,ರವಿ ಅಮೀನ್, ಶ್ರೀಶ ನಾಯಕ್ ಪೆರ್ಣಂಕಿಲ, ಕೆ.ರಾಘವೇಂದ್ರ ಕಿಣಿ, ರೇಶ್ಮಾ ಉದಯ ಶೆಟ್ಟಿ, ಲಕ್ಷ್ಮೀ ಮಂಜುನಾಥ್, ಶ್ರೀಶ ಭಟ್ ಕೊಡವೂರು, ದಿನೇಶ್ ಅಮೀನ್, ಪ್ರಭಾಕರ್ ಪೂಜಾರಿ, ಬಾಲಕೃಷ್ಣ ಶೆಟ್ಟಿ, ರಾಜೇಂದ್ರ ಪಂದುಬೆಟ್ಟು, ಆನಂದ್ ಸುವರ್ಣ, ಲಕ್ಷ್ಮೀ ಕಿನ್ನಿಮುಲ್ಕಿ, ಶ್ರೀಲತ, ಸಂತೋಷ್ ಆಚಾರ್ಯ, ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಜಗದೀಶ್ ಆಚಾರ್ಯ ಕಪ್ಪೆಟ್ಟು,ದಾವೂದ್ ಅಬೂಬಕರ್, ವಿಜಯ ಕೊಡವೂರು, ಕೃಷ್ಣಪ್ಪ ಜತ್ತನ್, ಮಂಜುನಾಥ್ ಮಣಿಪಾಲ, ರೋಷನ್ ಶೆಟ್ಟಿ, ನಗರಸಭಾ ಸದಸ್ಯರು, ನಗರ ಮಂಡಲ ವ್ಯಾಪ್ತಿಯ ಗ್ರಾಮ ಪಂಚಾಯತ್ ಅಧ್ಯಕ್ಷರು, ಕಿಶೋರ್ ಕುಮಾರ್ ಕರಂಬಳ್ಳಿ, ನಾಗರಾಜ್ ಶೇಟ್, ಸಂತೋಷ್ ಜತ್ತನ್, ನಗರ ಮಂಡಲ ಸಹಿತ ಮೋರ್ಚಾ, ಪ್ರಕೋಷ್ಠ ಹಾಗೂ ಶಕ್ತಿ ಕೇಂದ್ರಗಳ ಪ್ರಮುಖರು ಉಪಸ್ಥಿತರಿದ್ದರು.
Post a Comment