".

Header Ads

ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ :- ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ


 ಮಳೆಗಾಲವು ಕೀಟಜನ್ಯ ರೋಗಗಳ ಹರಡುವಿಕೆಗೆ ಪೂರಕವಾದ ವಾತಾವರಣವಾಗಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುತ್ತದೆ. ಇವುಗಳ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆರೋಗ್ಯ ಇಲಾಕೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚಿಸಿದರು.ಅವರು ಇಂದು ನಗರದ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ನಡೆದ ಜಿಲ್ಲಾ ಆರೋಗ್ಯ ಇಲಾಖೆಯ ವಿವಿಧ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಸರ್ಕಾರಿ ಕಚೇರಿಗಳನ್ನು ತಂಬಾಕು ಮುಕ್ತ ಕಚೇರಿಗಳನ್ನಾಗಿ ಅನುಷ್ಠಾನಗೊಳಿಸಿದ್ದು, ಇದುವರೆಗೆ 51 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರ, 13 ಗ್ರಾಮ ಪಂಚಾಯತ್ ಕಚೇರಿ, 18 ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಚೇರಿಗಳನ್ನು ತಂಬಾಕು ಮುಕ್ತ ಕಚೇರಿ ಎಂದು ಘೋಷಿಸಲಾಗಿದೆ ಎಂದರು.

ಹಾಸಿಗೆ ಪೀಡಿತರಾಗಿರುವ ಎಂಡೋಸಲ್ಫಾನ್ ಸಂತ್ರಸ್ಥರಿಗೆ ಅವರ ಮನೆಗೆ ತೆರಳಿ ಅವಶ್ಯಕತೆಯಿರುವ ಆರೋಗ್ಯ ಸೇವೆಯನ್ನು ನೀಡಬೇಕು. ಅವರಿಗೆ ಅಂಗವಿಕಲತೆಯ ಪ್ರಮಾಣ ಪತ್ರವನ್ನು ನೀಡಬೇಕು ಎಂದರು.

ಬೀಡಿ ಕಾರ್ಮಿಕರ ಆರೋಗ್ಯ ಮತ್ತು ಆರ್ಥಿಕ ಪರಿಸ್ಥಿತಿಯ ಸುಧಾರಣೆ ಹಾಗೂ ಪರಿಹಾರಾತ್ಮಕ ಯೋಜನೆಯಡಿ ಬೀಡಿ ಕಾರ್ಮಿಕರುಗಳ ಜೀವನಾದಾಯಕ್ಕೆ ಪರ್ಯಾಯ ಉದ್ಯೋಗ ಕೈಗೊಳ್ಳಲು ಸ್ವ-ಉದ್ಯೋಗ ತರಬೇತಿ ನೀಡಿ, ಸ್ವಂತ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು ,ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಲು ನಗರ ಸ್ಥಳೀಯ ಸಂಸ್ಥೆಗಳಿoದ ಪ್ರತ್ಯೇಕ ಪರವಾನಿಗೆ ಪಡೆದವರು ಮಾತ್ರ ಮಾರಾಟ ಮಾಡಲು ಅವಕಾಶವಿದ್ದು, ಈ ಬಗ್ಗೆ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಕಾರ್ಯಾಗಾರ ನಡೆಸಬೇಕು ಎಂದರು.

Powered by Blogger.