ಉಡುಪಿ:- ಬೀಚ್, ನದಿ ಹಾಗೂ ಜಲಪಾತಗಳ ಬಳಿ ತೆರಳದಂತೆ ಸೂಚನೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ
ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಈ ನಡುವೆ ಪ್ರವಾಸಿಗರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು ಅಪಾಯದ ಅರಿವಾಗದೇ ನಿಷೇಧಿತ ಪ್ರದೇಶಗಳಲ್ಲಿ ಸಮುದ್ರಕ್ಕೆ ಇಳಿದು ಪ್ರಾಣ ಕಳೆದು ಕೊಳ್ಳುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಯುವಜನರು, ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು,ಬೀಚ್‌ಗಳು, ನದಿಗಳು ಹಾಗೂ ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment