ಉಡುಪಿ: ಪಡಿತರ ಚೀಟಿದಾರರು ಬ್ಯಾಂಕ್ ಖಾತೆ ತೆರೆಯಲು ಶಿಬಿರ ಆಯೋಜನೆ
ರಾಜ್ಯ ಸರ್ಕಾರದ ಆದೇಶದಂತೆ ನಾಲ್ಕಕ್ಕಿಂತ ಹೆಚ್ಚು ಸದಸ್ಯರು ಹಾಗೂ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿ 5 ಕೆ.ಜಿ ಆಹಾರಧಾನ್ಯವನ್ನು ಸೇರಿಸಿ ಪ್ರತಿ ತಿಂಗಳು ಪ್ರತಿ ಫಲಾನುಭವಿಗೆ ತಲಾ 10 ಕೆಜಿ ಆಹಾರಧಾನ್ಯ ಉಚಿತವಾಗಿ ವಿತರಿಸಲು ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಬಿಡ್‍ದಾರರು ಆಹಾರಧಾನ್ಯವನ್ನು ಸರಬರಾಜು ಮಾಡುವವರೆಗೆ ಅಂತ್ಯೋದಯ ಅನ್ನ ಯೋಜನೆ ಹಾಗೂ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ ಆಹಾರ ಧಾನ್ಯದ ಬದಲಾಗಿ ಪ್ರತಿ ಕೆ.ಜಿಗೆ ರೂ.34/-ರಂತೆ ಪಡಿತರ ಚೀಟಿದಾರರ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ ಹಣವನ್ನು ವರ್ಗಾಯಿಸಬೇಕಾಗಿರುತ್ತದೆ.
ಪಡಿತರ ಚೀಟಿಯಲ್ಲಿ ಕಡ್ಡಾಯವಾಗಿ ಕುಟುಂಬದ ಮುಖ್ಯಸ್ಥರು ನಮೂದಾಗಿರಬೇಕು ಕುಟುಂಬದ ಮುಖ್ಯಸ್ಥರು ನಿಧನಹೊಂದಿದ್ದಲ್ಲಿ, ಸಂಬಂಧಪಟ್ಟ ತಾಲೂಕಿನ ಆಹಾರ ಶಾಖೆಗೆ ಭೇಟಿ ನೀಡಿ, ಆಹಾರ ನಿರೀಕ್ಷಕರಿಗೆ ಈ ಬಗ್ಗೆ ಮಾಹಿತಿ ನೀಡಿ, ಮೃತರ ಹೆಸರನ್ನು ಪಡಿತರ ಚೀಟಿಯಿಂದ ತೆಗೆದು ಹಾಕಿ, ಇ-ಕೆವೈಸಿ ಮೂಲಕ ಕುಟುಂಬದ ಮುಖ್ಯಸ್ಥರನ್ನು ನಮೂದು ಮಾಡಿಕೊಳ್ಳಬೇಕು. ಒಂದಕ್ಕಿಂತ ಹೆಚ್ಚು ಕುಟುಂಬದ ಮುಖ್ಯಸ್ಥರು ನಮೂದಾಗಿದ್ದಲ್ಲಿ ಅಂತಹವರಿಗೆ ನಗದು ವರ್ಗಾವಣೆಗೆ ಅವಕಾಶವಿರುವುದಿಲ್ಲ.
Post a Comment