ಹಿರಿಯಡ್ಕ:- ಖಾಸಗಿ ಬಸ್ ಸ್ಕೂಟಿಗೆ ಡಿಕ್ಕಿ ಸವಾರ ಸ್ಥಳದಲ್ಲೇ ಮೃತ
ಹಿರಿಯಡ್ಕದಿಂದ ಉಡುಪಿಗೆ ಬರುತ್ತಿದ್ದ ಖಾಸಗಿ ಬಸ್ ಓಂತಿಬೆಟ್ಟು ಕಲ್ಯಾಣ ಮಂಟಪದ ಬಳಿ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಸವಾರ ಕೃಷ್ಣ ಪೂಜಾರಿ(60)ಸ್ಥಳದಲ್ಲೇ ಮೃತಪಟ್ಟರೆ, ಸಹಸವಾರ ನಿವೃತ್ತ ಬ್ಯಾಂಕ್ ಉದ್ಯೋಗಿ ಬೋಜ ಶೆಟ್ಟಿ ಗಾಯಗೊಂಡಿದ್ದಾರೆ.ಮೃತಪಟ್ಟವರ ಕೃಷ್ಣ ಪೂಜಾರಿಯವರು ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಕೊಂಡಿದ್ದರು ಇವರು ಓಂತಿಬೆಟ್ಟುನಿಂದ ಉಡುಪಿ ಕಡೆ ಸ್ಕೂಟಿನಲ್ಲಿ ಹೋಗುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a Comment