".

Header Ads

ಮಂಗಳೂರು:- ಎಲೆಕ್ಟ್ರಿಕ್ ಬೈಕ್ ನಲ್ಲಿ ಆಕಸ್ಮಿಕ ಬೆಂಕಿ…!!

 


ಎಲೆಕ್ಟ್ರಿಕ್ ಬೈಕ್ ವೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಉರ್ವ ಮಾರ್ಕೆಟ್ ರಸ್ತೆ ಬಳಿಯಲ್ಲಿದ್ದ ಬೈಕ್ ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದು ಬಂದಿದೆ.ಅವಘಡಕ್ಕೆ ಈಡಾಗಿರುವ ಬೈಕ್ ಅಕ್ಷಯ ಪಾತ್ರೆಯ ಕಂಪನಿಗೆ ಸೇರಿದ್ದು ಎನ್ನಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಬೆಂಕಿ ನಂದಿಸಿ ಅನಾಹುತ ತಪ್ಪಿಸಿದ್ದಾರೆ.
ತಾಂತ್ರಿಕ ದೋಷದ ಕಾರಣದಿಂದ ಎಲೆಕ್ಟ್ರಿಕ್ ಬೈಕ್ ಗೆ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

Powered by Blogger.