".

Header Ads

ಉಡುಪಿ :-ಕಾರ್ಮಿಕರಿಬ್ಬರ ನಡುವಿನ ಗಲಾಟೆ – ಒರ್ವನ ಕೊಲೆಯಲ್ಲಿ ಅಂತ್ಯ

 

ಕಾರ್ಮಿಕರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಸೋಮವಾರ ಸಂಜೆ ಕಟಪಾಡಿಯಲ್ಲಿ ಸಂಭವಿಸಿದೆ.

ಮೃತರನ್ನು ಒರಿಸ್ಸಾ ಮೂಲದ ಕಾರ್ಮಿಕ ಗಣೇಶ್(50) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಕಟಪಾಡಿ -ಶಿರ್ವ ರಸ್ತೆಯಲ್ಲಿರುವ ಕಟ್ಟಡ ಕಾಮಗಾರಿ ಮಾಡುತ್ತಿದ್ದ ಇವರಿಬ್ಬರ ಮಧ್ಯೆ ಕೆಲಸದ ವಿಚಾರವಾಗಿ ನಡೆದ ಹೊಡೆದಾಟದಲ್ಲಿ ಗಣೇಶ್ ಗಂಭೀರವಾಗಿ ಗಾಯಗೊಂಡಿದ್ದರೆನ್ನಲಾಗಿದೆ. ಕೂಡಲೇ ಸ್ಥಳೀಯರು ಹಾಗೂ ಇತರ ಕಾರ್ಮಿಕರು ಗಣೇಶ್‌ನನ್ನು ಆಸ್ಪತ್ರೆಗೆ ಸಾಗಿಸಿದ್ದು, ದಾರಿ ಮಧ್ಯೆ ಗಣೇಶ್ ಮೃತಪಟ್ಟರೆಂದು ತಿಳಿದುಬಂದಿದೆ.

ಸ್ಥಳಕ್ಕೆ ಉಡುಪಿ ಎಸ್ಪಿ ಅಕ್ಷಯ್ ಹಾಕೇ ಮಚ್ಚೀಂದ್ರ, ಹೆಚ್ಚುವರಿ ಎಸ್ಪಿ ಸಿದ್ಧಲಿಂಗಪ್ಪ, ಕಾರ್ಕಳ ಡಿವೈಎಸ್ಪಿ ಅರವಿಂದ ಕುಲಗುಜ್ಜಿ, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ.ಸಿ.ಪೂವಯ್ಯ, ಕಾಪು ಎಸ್ಸೈ ಶ್ರೀಶೈಲ ಮುರಗೋಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Powered by Blogger.