".

Header Ads

ಬೆಳ್ತಂಗಡಿ: ಉಯ್ಯಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಮೃತ್ಯು

 


ಉಯ್ಯಾಲೆ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ನಡೆದಿದೆ.

ಮೃತ ಬಾಲಕನನ್ನು ಮಂಟಮೆ ನಿವಾಸಿ ಬಾಲಕೃಷ್ಣ ಅವರ ಪುತ್ರ ಶ್ರೀಷಾ (14) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಉಯ್ಯಾಲೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಮೃತಪಟ್ಟಿದ್ದಾನೆ ಎನ್ನಾಗಿದೆ. ಮನೆಯವರು ಬಂದು ನೋಡಿದಾಗ ಉಯ್ಯಾಲೆ ಆಟವಾಡುತ್ತಿದ್ದ ವೇಳೆ ಬಾಲಕ ನೆಲದಲ್ಲಿ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರು ಯಾವುದೇ ಪ್ರಯೋಜನವಾಗಿಲ್ಲ.ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Powered by Blogger.