".

Header Ads

ಇಂದು ಸಿಎಂ ಸಿದ್ದರಾಮಯ್ಯ ಉಡುಪಿಗೆ ಭೇಟಿ – ಸಂಘಟನೆಗಳಿಂದ ಪ್ರತಿಭಟನೆ ಸಾಧ್ಯತೆ

 


ಹೊಸ ಸರ್ಕಾರ ರಚನೆ ಆದ ಬಳಿಕ ಮೊದಲ ಬಾರಿಗೆ ಇಂದು ಸಿಎಂ ಸಿದ್ದರಾಮಯ್ಯ ಉಡುಪಿಗೆ ಆಗಮಿಸುತ್ತಿದ್ದಾರೆ.ಈ ಸಂದರ್ಭ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆಯ ಬಿಸಿ ತಟ್ಟುವ ಸಾಧ್ಯತೆಯೂ ಇದೆ‌. ಕಳೆದ ಒಂದು ವಾರದಿಂದ ಪ್ಯಾರಾಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆ, ರಾಷ್ಟಮಟ್ಟದಲ್ಲಿ ಸುದ್ದಿಯಲ್ಲಿತ್ತು. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ಉಡುಪಿಗೆ ಭೇಟಿ ನೀಡುತ್ತಿರುವುದು ಮಹತ್ವ ಪಡೆದುಕೊಂಡಿದೆ. ಸಿಎಂ ಸಿದ್ಧರಾಮಯ್ಯ ಅವರು ಬೆಳಿಗ್ಗೆ 11.30 ಗಂಟೆಗೆ ಪಡುಬಿದ್ರಿಯಲ್ಲಿ ಕಡಲ್ಕೊರೆತದಿಂದ ಹಾನಿಯಾಗಿರುವ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಜಿಲ್ಲಾ ಪಂಚಾಯತ್ ನಲ್ಲಿ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಲಿದೆ. ನಂತರ ರಸ್ತೆ ಮಾರ್ಗವಾಗಿ ಮಂಗಳೂರು ವಿಮಾನ ನಿಲ್ದಾಣದ ಮೂಲಕ ನಿರ್ಗಮಿಸಲಿದ್ದಾರೆ. ಉಡುಪಿ ಕಾಲೇಜು ಪ್ರಕರಣದ ವಿಚಾರವಾಗಿ ರಾಜ್ಯ ಸರ್ಕಾರ ಲಘುವಾಗಿ ಪರಿಗಣಿಸಿರುವ ಹಿನ್ನಲೆಯಲ್ಲಿ, ಸಿಎಂ ಸಿದ್ದರಾಮಯ್ಯ ಅವರ ಭೇಟಿ ಸಂದರ್ಭದಲ್ಲಿ ಬಿಜೆಪಿ, ಹಿಂದೂಪರ ಸಂಘಟನೆಗಳು ಕಪ್ಪು ಬಟ್ಟೆ ತೋರಿಸಿ ಪ್ರತಿಭಟನೆ ಮಾಡುವ ಸಾಧ್ಯತೆ ಇದೆ.

Powered by Blogger.