".

Header Ads

ಅಪಾರ್ಟ್ಮೆಂಟ್‌ನ 12ನೇ ಮಹಡಿಯಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಸಾವು

 


ಅಪಾರ್ಟ್ಮೆಂಟ್‌ನ 12ನೇ ಮಹಡಿಯಿಂದ ಬಿದ್ದು 10ನೇ ತರಗತಿಯ ವಿದ್ಯಾರ್ಥಿನಿ   ಸಾವನ್ನಪ್ಪಿರುವ ಘಟನೆ ನಗರದ ಬೆಳ್ಳಂದೂರಿನ ಕ್ಲಾಸಿಕ್ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ.ಜೆಸ್ಸಿಕಾ (15) ಸಾವನ್ನಪ್ಪಿದ ಬಾಲಕಿ.


ಮಂಗಳವಾರ ಬೆಳಗ್ಗೆ 10:30ರ ವೇಳೆಗೆ ಘಟನೆ ನಡೆದಿದೆ. ಕಳೆದ 2 ವರ್ಷಗಳಿಂದ ಬಾಲಕಿ   ತನ್ನ ತಂದೆ ಹಾಗೂ ತಾಯಿಯೊಂದಿಗೆ ಕ್ಲಾಸಿಕ್ ಅಪಾರ್ಟ್ಮೆಂಟ್‌ನ 11ನೇ ಮಹಡಿಯಲ್ಲಿ ವಾಸವಿದ್ದಳು.
ಮೂಲತಃ ತಮಿಳುನಾಡಿನ ಕುಟುಂಬವಾಗಿದ್ದು, ತಂದೆ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

ತಾಯಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಜೆಸ್ಸಿಕಾ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದಳು.
ಜೆಸ್ಸಿಕಾ ಇತ್ತೀಚೆಗೆ ಶಾಲೆಗೂ ಸರಿಯಾಗಿ ಹೋಗುತ್ತಿರಲಿಲ್ಲ ಎಂಬುದು ತಿಳಿದುಬಂದಿದೆ. ಕಳೆದ 3 ತಿಂಗಳಲ್ಲಿ 6 ದಿನ ಮಾತ್ರವೇ ಜೆಸ್ಸಿಕಾ ಶಾಲೆಗೆ ಹೋಗಿದ್ದಳು. ಇಂದು ಬೆಳಗ್ಗೆ ಬಾಲಕಿ ಶಾಲೆಗೆ ಹೋಗಿ ಪುನಃ ವಾಪಸ್ ಬಂದಿದ್ದಾಳೆ.

ನಂತರ ಟೀಚರ್ ತಾಯಿಗೆ ಕರೆ ಮಾಡಿ ಮಗಳು ಶಾಲೆಗೆ ಬಂದಿಲ್ಲ ಎಂದು ಹೇಳಿದ್ದಾರೆ. ನಂತರ ಪೋಷಕರು ಪರಿಶೀಲನೆ ಮಾಡಿದಾಗ ವಿಚಾರ ತಿಳಿದುಬಂದಿದೆ.

ಜೆಸ್ಸಿಕಾ ಕುಟುಂಬ ವಾಸವಿದ್ದ ಫ್ಲೋರ್‌ನ ಮೇಲಿನ ಫ್ಲೋರ್‌ಗೆ ತೆರಳಿ ಆತ್ಮಹತ್ಯೆ   ಮಾಡಿಕೊಂಡಿದ್ದಾಳೆ. ಮನೆಯಲ್ಲಿ, ಅಕ್ಕ-ಪಕ್ಕದಲ್ಲಿ ಯಾರೂ ಇಲ್ಲದ ಸಂದರ್ಭ 12ನೇ ಫ್ಲೋರ್‌ನಿಂದ ಬಿದ್ದು ಸಾವನ್ನಪ್ಪಿದ್ದಾಳೆ.

ಪ್ರಾಥಮಿಕವಾಗಿ ಬಾಲಕಿ ಶಾಲೆಗೆ ಹೋಗಿ ಕ್ಲಾಸ್ ಅಟೆಂಡ್ ಮಾಡದೆ ವಾಪಸ್ ಬರುತ್ತಿದ್ದಳು ಎಂಬುದು ತಿಳಿದುಬಂದಿದೆ. ಆಕೆ ಮಾನಸಿಕವಾಗಿ ನೊಂದಿದ್ದಳು ಎನ್ನಲಾಗಿದೆ.

ಆತ್ಮಹತ್ಯೆಗೆ ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ. ಘಟನೆ ಬಗ್ಗೆ ಬೆಳ್ಳಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Powered by Blogger.