".

Header Ads

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ : ಸೆ. 3ರಂದು ನೂತನ ಕಾರ್ಯಾಲಯದ ಶುಭಾರಂಭ ಮತ್ತು ಗುರು ಜಯಂತಿ ಆಚರಣೆ


 ಸಮಾಜ ಬಾಂಧವರ ಶ್ರೇಯೋಭಿವೃದ್ಧಿಗಾಗಿ ಸದಾ ಶ್ರಮಿಸುತ್ತಿರುವ ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿಯು ಶ್ರೀ ನಾರಾಯಣ ಗುರುಗಳ ತತ್ವ - ಉಪದೇಶ ಗಳನ್ನು ಅಳವಡಿಸಿಕೊಂಡು ವಿದ್ಯೆಗೆ ಹೆಚ್ಚಿನ ಮಹತ್ವ ನೀಡಿ ಪ್ರತಿವರ್ಷ ಅಸಹಾಯಕ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ನೀಡುವುದಲ್ಲದೆ ಅಸಹಾಯಕ ಸಮಾಜ ಬಾಂಧವರಿಗೆ ವೈದ್ಯಕೀಯ ನೆರವು ನೀಡಿ, ವಧು-ವರರ ಅನ್ವೇಷಣೆಗೆ ಸಹಾಯ ಮಾಡುತ್ತಾ ಬಂದಿರುವ ಸಂಘವು ಸದಸ್ಯ ಬಾಂಧವರ ಸುಖ-ದುಃಖಗಳಿಗೆ ಸದಾ ಸ್ಪಂದಿಸಿ ಪ್ರಗತಿಯ ಪಥದಲ್ಲಿ ಮುನ್ನೆಡೆಯುತ್ತಾ ಪ್ರತಿ ವರ್ಷ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಯಶಸ್ವಿಯಾಗಿ ನಿರ್ವಹಿಸಿ ಸದಸ್ಯರ, ಹಿತೈಷಿಗಳ ಹಾಗೂ ಸಮಾಜ ಬಾಂಧವರ ಪ್ರಶಂಶೆಗೆ ಪಾತ್ರವಾಗಿದೆ. ಇದೀಗ ಥಾಣೆ ರೈಲ್ವೆ ನಿಲ್ದಾಣದ ಸಮೀಪ ನೌಪಾಡ ಪರಿಸರದಲ್ಲಿ ನೂತನ ಕಾರ್ಯಾಲಯವನ್ನು ಖರೀದಿಸಿದ್ದು ಅದರ ಶುಭಾರಂಭ ಮತ್ತು ಬ್ರಹ್ಮಶ್ರೀ ನಾರಾಯಣ ಗುರುವರ್ಯರ 169 ನೇ ಜಯಂತ್ಯುತ್ಸವವನ್ನು ಸೆ. 3 ರಂದು ರವಿವಾರ ಥಾಣೆ ಪಶ್ಚಿಮದ ನೌಪಾಡದ ಗಾಂವ್ದೇವಿ ಸಮೀಪವಿರುವ ಮುಕುಂದ್ ನಾಥು ಪಥ್ ನಲ್ಲಿರುವ “9 ಮಾನಸಿ” ಕಟ್ಟಡದ ಪ್ರಥಮ ಮಹಡಿಯಲ್ಲಿರುವ ಸಂಘದ ನೂತನ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಸೂರ್ಯ ಎಸ್. ಪೂಜಾರಿ ನೇತೃತ್ವದಲ್ಲಿ ಜರಗಲಿದೆ.

ಅಂದು ಬೆಳಿಗ್ಗೆ ಗಂಟೆ 7-00 ರಿಂದ ವಾಸ್ತು ಪೂಜೆ, ವಾಸ್ತು ಹೋಮ, ವಾಸ್ತು ಬಲಿ, ಗಣಹೋಮ, ಲಕ್ಷಿö್ಮ ಪೂಜೆ, ಮಂಟಪ ಶುದ್ಧಿ, ಗುರು ಪೂಜೆ ಮುಂತಾದ ಧಾರ್ಮಿಕ ವಿಧಿ- ವಿಧಾನಗಳು ನೆಡೆಯಲಿದ್ದು ಬಳಿಕ ನೂತನ ಕಾರ್ಯಾಲಯದ ಉದ್ಘಾಟನೆ ನೆರವೇರಲಿದೆ ತದನಂತರ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 169 ನೇ ಜಯಂತಿ ಅಂಗವಾಗಿ ಭಜನೆ, ಮಹಾ ಮಂಗಳಾರತಿ, ತೀರ್ಥ-ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ ಜರಗಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ

ಈ ನೂತನ ಕಾರ್ಯಾಲಯವನ್ನು ಸಂಘದ ಗೌರವಾಧ್ಯಕ್ಷರಾದ ಸುರೇಶ ಎಸ್. ಪೂಜಾರಿ ಉದ್ಘಾಟಿಸಲಿದ್ದು ಅಧ್ಯಕ್ಷರಾದ ಸೂರ್ಯ ಎಸ್. ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ ಸಮಾಜದ ಗೌರವಾನ್ವಿತ ಗಣ್ಯರುಗಳಾದ ಮಂಜುನಾಥ ಎ. ಬಿಲ್ಲವ ಶಿರೂರು ( ಸಂಘದ ಮಾಜಿ ಅಧ್ಯಕ್ಷರು ಹಾಗೂ ಆಡಳಿತ ನಿರ್ದೇಶಕರು-ಟೆಕ್ನೋ ಫ್ಲೋ ಕನಸ್ಟ್çಕ್ಸನ್ ಪ್ರೈವೇಟ್ ಲಿಮಿಟೆಡ್), ಎನ್. ಟಿ. ಪೂಜಾರಿ(ಕಾರ್ಯಾಧ್ಯಕ್ಷರು-ಬಿಲ್ಲವ ಛೇಂಬರ್ಸ್
 ಆಪ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್), ಸುನೀಲ್ ಎಸ್. ಪೂಜಾರಿ (ಉದ್ಯಮಿ-ಶಿವಸಾಗರ ವಿಲೇಪಾರ್ಲೆ), ಆನಂದ ಎಮ್. ಪೂಜಾರಿ (ಸಂಘದ ಮಾಜಿ ಅಧ್ಯಕ್ಷರು ಹಾಗೂ ನ್ಯಾಯವಾದಿ ಉಚ್ಚ ನ್ಯಾಯಾಲಯ ಮುಂಬಯಿ), ವಿಶ್ವನಾಥ ಎ. ಪೂಜಾರಿ ಕೋಡಿ (ಉದ್ಯಮಿ- ಅರುಣಾ ಟೆಕ್ಸ್ಟೈಲ್ಸ್ ಥಾಣೆ), ತಿಮ್ಮಪ್ಪ ಸಿ. ಪೂಜಾರಿ ಬಾಗಾಳಮನೆ ಏಳಜಿತ್ (ಉದ್ಯಮಿ ಮುಂಬಯಿ) ಇವರುಗಳು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು ಸಂಘದ ಮಾಜಿ ಅಧ್ಯಕ್ಷರುಗಳಾದ ಬಿ. ಎಮ್. ಬಾಳಿಕೆರೆ, ಎಸ್. ಟಿ. ಕಂಡ್ಲೂರು, ಕೆ. ಡಿ. ಪೂಜಾರಿ ಮತ್ತು ಎಸ್. ಟಿ. ಪೂಜಾರಿ ಗೌರವ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ 



ಸದಸ್ಯರು, ಸಮಾಜ ಬಾಂಧವರು ಹಾಗೂ ಹಿತಚಿಂತಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೀರ್ಥ ಪ್ರಸಾದ ಸ್ವೀಕರಿಸಿ ಗುರುವರ್ಯರ ಕೃಪಾ ಕಟಾಕ್ಷಕ್ಕೆ ಪಾತ್ರರಾಗುವುದರೊಂದಿಗೆ ಈ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕೆಂದು ಸಂಘದ ಗೌರವಾಧ್ಯಕ್ಷರಾದ ಸುರೇಶ ಎಸ್. ಪೂಜಾರಿ, ಅಧ್ಯಕ್ಷರಾದ ಸೂರ್ಯ ಎಸ್. ಪೂಜಾರಿ, ಉಪಾಧ್ಯಕ್ಷರುಗಳಾದ ಎನ್. ಎಮ್. ಬಿಲ್ಲವ, ಆನಂದ ಕೆ. ಪೂಜಾರಿ ಗೌರವ ಪ್ರಧಾನ ಕಾರ್ಯದರ್ಶಿ ಅಶೋಕ ಎನ್. ಪೂಜಾರಿ, ಗೌರವ ಕೋಶಾಧಿಕಾರಿ ರಾಜಶ್ರೀ ಪಿ. ಸಾಲ್ಯಾನ್, ಜತೆ ಕಾರ್ಯದರ್ಶಿಗಳಾದ ಸುಶೀಲ ಆರ್. ಪೂಜಾರಿ, ಹರೀಶ್ ಎನ್. ಪೂಜಾರಿ, ಜತೆ ಕೋಶಾಧಿಕಾರಿಗಳಾದ ರಮೇಶ ಜಿ. ಬಿಲ್ಲವ, ರತ್ನಾಕರ ಎಸ್. ಪೂಜಾರಿ, ಮಹಿಳಾ ಸಮಿತಿಯ ಕಾರ್ಯಾಧ್ಯಕ್ಷೆ ಮಲ್ಲಿಕಾ ಎಸ್. ಪೂಜಾರಿ, ಯುವ ಅಭ್ಯುದಯ ಸಮಿತಿಯ ಕಾರ್ಯಾಧ್ಯಕ್ಷೆ ದೀಪಾ ವೈ. ಪೂಜಾರಿ, ಧಾರ್ಮಿಕ ಮತ್ತು ಸಾಮಾಜಿಕ ಸಮಿತಿಯ ಕಾರ್ಯಾಧ್ಯಕ್ಷ ಶ್ರೀಧರ ವಿ. ಪೂಜಾರಿ, ಕಾರ್ಯದರ್ಶಿ ಬಾಬು ಎ. ಪೂಜಾರಿ ಮತ್ತು ಆಡಳಿತ ಮಂಡಳಿ ಹಾಗೂ ಉಪಸಮಿತಿಗಳ ಪದಾಧಿಕಾರಿಗಳು ಮತ್ತು ಸದಸ್ಯರು ಈ ಮೂಲಕ ವಿನಂತಿಸಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಆಡಳಿತ ಮಂಡಳಿ ಹಾಗೂ ಉಪಸಮಿತಿಗಳ ಪದಾಧಿಕಾರಿಗಳು ಮತ್ತು ಸದಸ್ಯರನ್ನು (9867811733 / 9820718785 / 9167116558) ಸಂಪರ್ಕಿಸಬಹುದೆoದು ಅಧ್ಯಕ್ಷರಾದ ಸೂರ್ಯ ಎಸ್. ಪೂಜಾರಿ ಪ್ರಧಾನ ಕಾರ್ಯದರ್ಶಿ ಅಶೋಕ ಎನ್. ಪೂಜಾರಿ ಹಾಗೂ ಕೋಶಾಧಿಕಾರಿ ರಾಜಶ್ರೀ ಪಿ. ಸಾಲ್ಯಾನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Powered by Blogger.