".

Header Ads

ಕುಂದಾಪುರ:- ಎಸ್ಸೆಸ್ಸೆಲ್ಸಿವಿದ್ಯಾರ್ಥಿನಿ ಆತ್ಮಹತ್ಯೆ

ಎಸ್ಸೆಸ್ಸೆಲ್ಸಿ ಓದುತ್ತಿದ್ದ, ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಕೋಣೆ ಎಂಬಲ್ಲಿ ನಡೆದಿದೆ.

 
ಕುಂದಾಪುರದ ಪುರಸಭೆಯಲ್ಲಿ ಪೌರಕಾರ್ಮಿಕರಾಗಿರುವ ಪಡುಕೋಣೆ ನಿವಾಸಿಗಳಾದ ಪ್ರಶಾಂತ್, ಸುನಂದಾ ದಂಪತಿ ಪುತ್ರಿ ಸಿಂಧು(16) ಆತ್ಮಹತ್ಯೆ ಮಾಡಿಕೊಂಡವರು.

ಸಿಂಧು ಕುಂದಾಪುರದ ವಡೇರಹೋಬಳಿ ಎಂಬಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿದ್ದು ಸಮೀಪದ ಸರ್ಕಾರಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದಳು. ಕಳೆದೆರಡು ದಿನಗಳ ಹಿಂದೆ ಅನಾರೋಗ್ಯದ ಕಾರಣದಿಂದ ತನ್ನ ಮನೆಗೆ ಹೋಗಿದ್ದಳು.

ಬುಧವಾರ ತಾಯಿಯೊಂದಿಗೆ ಆಸ್ಪತ್ರೆಗೆ ತೆರಳಿದ್ದ ಸಿಂಧುವನ್ನು ಗುರುವಾರ ಶಾಲೆಗೆ ಬಿಡುವುದಾಗಿ ತಂದೆ ತಿಳಿಸಿದ್ದರು. ಆದರೆ ಅದೇಕೋ ಸಿಂಧು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Powered by Blogger.