".

Header Ads

ಮುಂಬೈ ಗೋ ಕಾಲಿಟ್ಟ ಸೌಜನ್ಯ ಪ್ರಕರಣ : ಬೃಹತ್ ಪ್ರತಿಭಟನೆ ನಡೆಸಲು ಪೂರ್ವಬಾವಿ ಸಭೆ

 


ಧರ್ಮಸ್ಥಳ ಪರಿಸರದ ಬಾಲೆ ಸೌಜನ್ಯಳ ನಿಜವಾದ ಕೊಲೆಗಾರ ಯಾರು ಎಂದು ತಿಳಿಯುವರೇ ಹೋರಾಟ ಆರಂಭವಾಗಿದೆ. ಈ ಹೋರಾಟದಲ್ಲಿ ನ್ಯಾಯ ಸಿಗಲೇಬೇಕೆಂದು ಪ್ರೋತ್ಸಾಹಿಸಿ ಮಹಾರಾಷ್ಟ್ರದ ಮಣ್ಣಿನಲ್ಲಿ ನೆಲೆಸಿದ ಸಮಾನ ಮನಸ್ಕರಾದ ನಾವು ಮುಂಬಯಿಯಲ್ಲೂ ಬೃಹತ್ ಪ್ರತಿಭಟನೆ ನಡೆಸುವ ಉದ್ದೇಶದಿಂದ ಪೂರ್ವಬಾವಿ ಸಭೆಯಲ್ಲಿ ಒಟ್ಟುಗೂಡಿದ್ದೇವೆ.

ನಮ್ಮ ನಡೆ ಕೇವಲ ನ್ಯಾಯದ ಕಡೆ. ಹಿಂದೆ ಸಂತೋಷ್ ರಾವ್ ಎಂಬ ಸಜ್ಜನ ಯುವಕನನ್ನು ಆರೋಪಿಯ ಸ್ಥಾನದಲ್ಲಿಟ್ಟು ಇದೀಗ ನ್ಯಾಯಾಲಯವು ಅವರನ್ನು ನಿರಾಪರಾಧಿ ಎಂದು ತೀರ್ಪು ನೀಡಿದೆ. ಹಾಗಾಗಿ ನಿಜವಾದ ಆರೋಪಿ ಅಲ್ಲದೆ ಸಂತೋಷ್ ರಾವ್ ಹಾಗೂ ಅವರ ಕುಟುಂಬಕ್ಕೆ ಕಳಂಕ ತಂದವರು ಯಾರು ಎಂಬ ಗೊಂದಲವು ಈ ಪ್ರತಿಭಟನೆಗೆ ಕಾರಣವಾಗಿದೆ. ಇದಕ್ಕಾಗಿ ಎಸ್ ಐಟಿ ಮುಖೇನ ನಿವೃತ್ತ ನ್ಯಾಯಾಧೀಶರನ್ನು ನೇಮಿಸಿ ಮರು ತನಿಖೆ ನಡೆಸಬೇಕೆಂದು ಸರಕಾರಕ್ಕೆ ಮನವಿ ಮಾಡಬೇಕು.

ನಾವು ಯಾರದ್ದೇ ಚಾರಿತ್ರ್ಯ ಹರಣ ಮಾಡದೆ ನ್ಯಾಯಕ್ಕಾಗಿ ಪ್ರತಿಭಟಿಸುವ ಎಂದು ಕನ್ನಡ ಜಾನಪದ ಪರಿಷತ್ ಮಹಾರಾಷ್ಟ್ರದ ಅದ್ಯಕ್ಷ, ಸಮಾಜ ಸೇವಕ ಸುರೇಶ್ ಶೆಟ್ಟಿ ಯೆಯ್ಯಾಡಿ ಹೇಳಿದರು.   ಮೀರಾರೋಡ್ ಶೀತಲ್ ನಗರದ ಸಾಯಿ ಸಾಫಲ್ಯ ವಸತಿ ಸಂಕೀರ್ಣದ ವಠಾರದಲ್ಲಿ ಸಭೆಯನ್ನು ಆಯೋಜಿಸಿ ಮಾತನಾಡುತ್ತಿದ್ದರು.

Powered by Blogger.