".

Header Ads

ವಿಡಿಯೋ ಚಿತ್ರೀಕರಣ ಪ್ರಕರಣ : ಉಡುಪಿಗೆ ಆಗಮಿಸಿದ ಸಿಐಡಿ ತಂಡ, ಸಿಐಡಿ ತನಿಖೆ ಪ್ರಕರಣ ಮುಚ್ಚಿ ಹಾಕುವ ಹುನ್ನಾರ : ಯಶ್ಪಾಲ್ ಸುವರ್ಣ

 


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ತನಿಖಾಧಿಯಾಗಿದ್ದ ಬೆಳ್ಳಿಯಪ್ಪ ಸಹಿತ ಮಲ್ಪೆ ಠಾಣೆಯ ಪೊಲೀಸರು ಘಟನೆ ಹಾಗು ತನಿಖೆಯ ವರದಿಗಳನ್ನು ಸಿಐಡಿಗೆ ಹಸ್ತಾಂತರಿಸಿದರು. ಇನ್ನು ಮುಂದೆ ಅಂಜುಮಾಲಿ ನಾಯಕ್ ಈ ಪ್ರಕರಣದ ತನಿಖಾಧಿಕಾರಿಯಾಗಿರಲಿದ್ದಾರೆ.

 ಸರಕಾರದಿಂದ ಪ್ರಕರಣದ ನಿರಾಕರಣೆ ವಿಪಕ್ಷವನ್ನು ಕೆರಳಿಸಿತ್ತು. ಸರಕಾರದ ಧೋರಣೆಯನ್ನು ಖಂಡಿಸಿ ಬಿಜೆಪಿ ನಾಯಕರು ರಾಜ್ಯಪಾಲರಿಗೆ ದೂರು ನೀಡಿದ್ದರು. ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ವಹಿಸಲು ನಿರ್ದೇಶನ ನೀಡುವಂತೆ ಒತ್ತಾಯಿಸಿದ್ದರು. ಇವೆಲ್ಲದಕ್ಕೂ ಮಣಿದ ಸರಕಾರ ಈಗ ಸಿಐಡಿ ತನಿಖೆಗೆ ವಹಿಸಿದೆ


ಪ್ರಕರಣವನ್ನು ಮುಚ್ಚಿಹಾಕುವ ಹುನ್ನಾರ ರಾಜ್ಯ ಸರಕಾರ ಮಾಡುತ್ತಿದೆ,ಉಡುಪಿ ಶಾಸಕ ಯಶ್ ಪಾಲ್ ಸುವರ್ಣ

 ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ಸಂದರ್ಭದಲ್ಲಿಯೇ ತರಾತುರಿಯಲ್ಲಿ ಸಿಐಡಿಗೆ ವರ್ಗಾಯಿಸುವ ಮೂಲಕ ಪ್ರಕರಣವನ್ನು ಮುಚ್ಚಿಹಾಕುವ ಹುನ್ನಾರ ರಾಜ್ಯ ಸರಕಾರ ಮಾಡುತ್ತಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.

ರಾಜ್ಯದಾದ್ಯಂತ ಈ ಪ್ರಕರಣದ ಬಗ್ಗೆ ತೀವ್ರ ಜನಾಕ್ರೋಶ, ಪ್ರತಿಭಟನೆಗೆ ಮಣಿದ ಸರಕಾರ ಈ ಹಿಂದೆ ತನಿಖಾಧಿಕಾರಿಯನ್ನು ಬದಲಾಯಿಸಿದ ಬಳಿಕ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ತನಿಖೆ ತೀವ್ರಗೊಳಿಸಿ ಪ್ರಕರಣದ ಸಂತ್ರಸ್ಥ ಹಾಗೂ ಆರೋಪಿ ವಿದ್ಯಾರ್ಥಿನಿಯರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಹೇಳಿಕೆ ಪಡೆಯುವ ಮೂಲಕ ಹಲವು ಪೂರಕ ಸಾಕ್ಷ್ಯಗಳನ್ನು ಸಂಗ್ರಹಿಸಿತ್ತು.

ಮಾತ್ರವಲ್ಲದೇ ಆರೋಪಿ ವಿದ್ಯಾರ್ಥಿನಿಯ ತಂದೆ ನಿಷೇಧಿತ ಪಿಎಫ್ ಐ ಸಂಘಟನೆಯ ಸಕ್ರಿಯ ಸದಸ್ಯ ಎಂಬ ಮಾಹಿತಿಗಳು ಕೂಡ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಇದೀಗ ಜಿಲ್ಲಾ ಪೊಲೀಸರ ತನಿಖೆ ಪೂರ್ಣಗೊಳ್ಳುವ ಮುನ್ನವೇ ತರಾತುರಿಯಲ್ಲಿ ಸಿಐಡಿಗೆ ವರ್ಗಾಯಿಸುವ ಮೂಲಕ ರಾಜ್ಯ ಸರಕಾರದ ನಡೆ ಮತ್ತೊಮ್ಮೆ ಗೊಂದಲ ಸೃಷ್ಟಿಸಿದೆ.

ಪ್ರಕರಣದ ಆರಂಭದ ದಿನದಿಂದಲೂ ಪೊಲೀಸ್ ಇಲಾಖೆಗೆ ಪ್ರತಿ ಹಂತದಲ್ಲೂ ಪ್ರಭಾವ ಬೀರುವ ಯತ್ನ ಮಾಡಿದ್ದ ಸರಕಾರ ಇದೀಗ ಆರೋಪಿಗಳನ್ನು ರಕ್ಷಿಸುವ ಸಲುವಾಗಿಯೇ ಸಿಐಡಿಗೆ ವರ್ಗಾಯಿಸಿದೆ ಎಂದು ನೇರ ಆರೋಪ ಮಾಡಿದ್ದಾರೆ.

Powered by Blogger.