".

Header Ads

ಪ್ರಾಣಕ್ಕಿಂತ ಜಾಸ್ತಿ ಪ್ರೀತಿಸುತ್ತಿದ್ದ ಪತಿಯ ಅಗಲಿಕೆಯಿಂದ ಹೊರಬರಲಾರದೆ ಆತ್ಮಹತ್ಯೆ ಮಾಡಿಕೊಂಡ ಪತ್ನಿ


ಪ್ರಾಣಕ್ಕಿಂತ ಜಾಸ್ತಿ ಪ್ರೀತಿಸುತ್ತಿದ್ದ ಪತಿಯ ಅಗಲಿಕೆಯಿಂದ ನೋವಿನಿಂದ ಹೊರಬರಲಾರದೆ ಯುವ ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೆರಾಜೆಯಲ್ಲಿ ನಡೆದಿದೆ.

ಮೃತರನ್ನು ಸವಣೂರು ಗ್ರಾಮದ ಪೆರಿಯಡ್ಕ ನಿವಾಸಿ, ದಿ| ದಿನೇಶ್ ಪೆರಿಯಡ್ಕ ಅವರ ಪತ್ನಿ , ನರ್ಸ್ ವೃತ್ತಿಯಲ್ಲಿದ್ದ ರೂಪಾ (30 ವರ್ಷ) ಎಂದು ತಿಳಿದು ಬಂದಿದೆ.

ರೂಪಾ ಅವರು ಮೂಲತಃ ಕೊಡಗು ಜಿಲ್ಲೆಯ ಪೆರಾಜೆಯವರು. ಎರಡು ವರ್ಷಗಳ ಹಿಂದೆ ಅವರನ್ನು ಸವಣೂರಿನ ಪೆರಿಯಡ್ಕಕ್ಕೆ ಮದುವೆ ಮಾಡಿಕೊಡಲಾಗಿತ್ತು.

ಕಳೆದ ಹದಿನೈದು ದಿನಗಳ ಅ. 7 ರಂದು ಪತಿ ದಿನೇಶ್ ಅನಾರೋಗ್ಯದಿಂದ ಮೃತಪಟ್ಟಿದ್ದರು.

ಇದಾದ ಬಳಿಕ ರೂಪಾ ತವರು ಮನೆ ಪೆರಾಜೆಗೆ ಬಂದಿದ್ದರು.  ಮನೆಯಲ್ಲಿ ಯಾರೂ ಇಲ್ಲದ ವೇಳೆ ಚೂಡಿದಾರ ಶಾಲು ಬಳಸಿ ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.

Powered by Blogger.