".

Header Ads

ಒಕ್ಕೂಟದ ವಿಶ್ವ ಬಂಟರ ಸಮ್ಮಿಲನಕ್ಕೆ ಉಡುಪಿ ಜಿಲ್ಲಾಧಿಕಾರಿ ಗೆ ಆಹ್ವಾನ


ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿ ಅವರ ನೇತೃತ್ವದಲ್ಲಿ ಉಡುಪಿ ಅಜ್ಜರಕಾಡು ಮೈದಾನದಲ್ಲಿ ದಿನಾಂಕ 28.10.2023 ಮತ್ತು 29.10.2023 ರಂದು ನಡೆಯಲಿರುವ ವಿಶ್ವ ಬಂಟರ ಸಮ್ಮಿಲನ , ವಿಶ್ವ ಬಂಟರ ಕ್ರೀಡಾಕೂಟ, ವಿಶ್ವ ಬಂಟರ ಸಂಸ್ಕೃತಿಕ ವೈಭವ ಈ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಯವರಾದ  ಕೆ. ವಿದ್ಯಾ ಕುಮಾರಿ ಅವರನ್ನು ಹೂಗುಚ್ಚ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.ಮಾನ್ಯ ಜಿಲ್ಲಾಧಿಕಾರಿ ಯವರು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಆಯೋಗದ  ಅಧ್ಯಕ್ಷರಾದ  ಜಯಪ್ರಕಾಶ್ ಹೆಗ್ಡೆ ಮತ್ತು ಒಕ್ಕೂಟದ ಉಪಾಧ್ಯಕ್ಷರಾದ  ಕರ್ನಿರೆ ವಿಶ್ವನಾಥ ಶೆಟ್ಟಿ, ಒಕ್ಕೂಟದ ಕಾರ್ಯದರ್ಶಿಗಳಾದ  ಇಂದ್ರಾಳಿ ಜಯಕರ ಶೆಟ್ಟಿ, ತೋನ್ಸೆ ಬಂಟರ ಸಂಘದ ಅಧ್ಯಕ್ಷರಾದ ಮನೋಹರ್ ಶೆಟ್ಟಿ  ತೋನ್ಸೆ, ಡಾ . ರೋಶನ್ ಶೆಟ್ಟಿ ಉಡುಪಿ ಜಿಲ್ಲಾ ಕ್ರೀಡಾ ಅಧಿಕಾರಿ ಉಪಸ್ಥಿತರಿದ್ದರು.
Powered by Blogger.