".

Header Ads

ಕೊಲ್ಲೂರು:ಉಡುಪಿ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ನೆಟ್ ಬಾಲ್ ಪಂದ್ಯಾಟ - ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ




 ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಕೊಲ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ನೆಟ್ ಬಾಲ್ ಪಂದ್ಯಾಟದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ವೇಳೆ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ, ಬೈಂದೂರು ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ, ಕೊಲ್ಲೂರು ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ನಾಗರಾಜ್ ಭಟ್, ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುಮಾರ್ ಶೆಟ್ಟಿ ಹುಂಚನಿ, ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರಾಮ ನಾಯ್ಕ್, ರಾಜ್ಯಮಟ್ಟದ ತೀರ್ಪುಗಾರ ಅವಿನಾಶ್ ಆಚಾರ್ಯ, ಹಳೆ ವಿದ್ಯಾರ್ಥಿಗಳಾದ ಗಣೇಶ್ , ವಿನಾಯಕ ಆಚಾರ್ಯ, ದೇವಿ ಪ್ರಸಾದ್ ಉಪಸ್ಥಿತರಿದ್ದರು















Powered by Blogger.