ಸೌಜನ್ಯ ತನಿಖೆಗೆ ಕಾನೂನಿನಲ್ಲಿ ಅವಕಾಶವಿಲ್ಲ; ಪೋಷಕರಿಗೂ ಅದನ್ನೇ ಹೇಳಿದ್ದೇನೆ | ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ !
ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಒತ್ತಾಯಿಸಲು ಕರಾವಳಿಯ ಶಾಸಕರ ದಂಡು ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿತ್ತು. ತದನಂತರ ಕರಾವಳಿಯ ಶಾಸಕರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.
ಸೌಜನ್ಯ ಪ್ರಕರಣವನ್ನು ತನಿಖೆ ನಡೆಸಬೇಕೆಂದು ಅವರು ಮನವಿ ಪತ್ರ ಸಲ್ಲಿಸಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.ಸಿದ್ದರಾಮಯ್ಯ ಹೇಳಿಕೆ:-
ಪ್ರಕರಣವನ್ನು ತನಿಖೆಗೆ ಒಳಪಡಿಸಲು ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈ ಕುರಿತು ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿದ್ದು ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು. ಅಥವಾ ಕೇಂದ್ರಿಯ ತನಿಖಾ ಸಂಸ್ಥೆ ಸಿಬಿಐಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆಯೆoದು ಮುಖ್ಯಮಂತ್ರಿ ಸಿದ್ಧರಾಮಯ್ಯರವರು ತಿಳಿಸಿರುವುದಾಗಿ ನಿಯೋಗದಲ್ಲಿದ್ದ ಬಿಜೆಪಿ ಶಾಸಕರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.
Post a Comment