ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಉಡುಪಿ ಜಿಲ್ಲೆ ಹಾಗೂ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೊಲ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಬಾಲಕ ಬಾಲಕಿಯ ಕುಸ್ತಿ ಪಂದ್ಯಾಟ
ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಉಡುಪಿ ಜಿಲ್ಲೆ ಹಾಗೂ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೊಲ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಬಾಲಕ ಬಾಲಕಿಯ ಕುಸ್ತಿ ಪಂದ್ಯಾಟವನ್ನು ಸಂಸ್ಥೆಯ ಹಳೆ ವಿದ್ಯಾರ್ಥ ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದ ವೇಟ್ ಲಿಫ್ಟರ್ ಮಂಜುನಾಥ ಮರಾಠಿ ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕ್ರೀಡಾ ಜೀವನದ ಪರಿಶ್ರಮ ಸಾಧನೆ ಮತ್ತು ಬದ್ಧತೆಯನ್ನು ಮಕ್ಕಳಿಗೆ ವಿವರಿಸಿದರು.
ಬಳಿಕ ಮಂಜುನಾಥ ಮರಾಠಿ ಅವರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಅತುಲ್ ಕುಮಾರ್ ಶೆಟ್ಟಿ ವಹಿಸಿ ಮಾತನಾಡಿ ಸದೃಢ ಮನಸ್ಸು ಮತ್ತು ಏಕಾಗ್ರತೆಯಿಂದ ಕುಸ್ತಿ ಪಂದ್ಯಾಟವನ್ನು ಜಯಿಸಬಹುದು ದಂದು ಶುಭ ಹಾರೈಸಿದರು.
ವಿಡಿಯೋ ಕ್ಲಿಕ್ ಮಾಡಿ ನೋಡಿ
ಮುಖ್ಯ ಅತಿಥಿಗಳಾಗಿ ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವನಿತಾ ಶೇರುಗಾರ್, ಉಪಾಧ್ಯಕ್ಷರಾದ ನಾಗೇಶ್, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಸಂಧ್ಯಾ ರಮೇಶ್, ಕೊಲ್ಲೂರು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ ಬಿ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ರವಿಶಂಕರ್ ಹೆಗಡೆ, ಬಂಡಾರ್ಕರ್ಸ್ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ಶಂಕರ್ ನಾರಾಯಣ, ಕೋಟ ದೈಹಿಕ ಶಿಕ್ಷಣ ನಿವೃತ್ತ ಉಪನ್ಯಾಸಕರಾದ ವಸಂತ್ ಶೆಟ್ಟಿ, ಉಪಸ್ಥಿತರಿದ್ದರು.
ಕೊಲ್ಲೂರು ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ಸುಕೇಶ್ ಶೆಟ್ಟಿ, ಹೊಸಮಠ ಸ್ವಾಗತಿಸಿ ಪ್ರಸ್ತಾವಿಸಿದರು. ಸಮಾಜಶಾಸ್ತ್ರ ಉಪನ್ಯಾಸಕ ನಾಗರಾಜ್ ಅಡಿಗ ಕಾರ್ಯಕ್ರಮ ನಿರೂಪಿಸಿದರು, ಕೊಲ್ಲೂರು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ವಂದಿಸಿದರು.
Post a Comment