ಉಡುಪಿ : -ನಗರದಲ್ಲಿ ಸರ ಕಳ್ಳರ ಹಾವಳಿ,ಇಬ್ಬರು ಮಹಿಳೆಯರ ಕರಿಮಣಿ ಸರ ಕಸಿದು ಪರಾರಿ
ನಗರದಲ್ಲಿ ಬೆಳ್ಳಂಬೆಳಗ್ಗೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಇಬ್ಬರು ಮಹಿಳೆಯರ ಚಿನ್ನದ ಸರ ಕಸಿದುಕೊಂಡು ಪರಾರಿಯಾದ ಘಟನೆ ಸೋಮವಾರ ನಡೆದಿದೆ.
ನಗರದ ರಾಜಾರಾಮ್ ಮೋಹನ್ ರಾಯ್ ರಸ್ತೆಯ ನಿವಾಸಿ ಎಪ್ಪತ್ತು ವರ್ಷದ ಗೀತಾ ಅವರು ಮುಂಜಾನೆ 5.30ಕ್ಕೆ ಶ್ರೀ ಕೃಷ್ಣ ಮಠಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ವೃದ್ಧೆಯ ಮೂವರು ಪವನ್ ತೂಕದ ಚಿನ್ನದ ಸರ ಕಸಿದು ಪರಾರಿಯಾಗಿದ್ದರು.

Post a Comment