ಬಸ್ಸಿನಲ್ಲಿ ಕಾಲೇಜ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ- ದೂರು ದಾಖಲು..!
ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಕಾಲೇಜಿಗೆ ಹೋಗುವ ವೇಳೆ ಬಸ್ ಹತ್ತುವಾಗ ಅಪರಿಚಿತ ಪ್ರಯಾಣಿಕನೊರ್ವ ಲೈಗಿಂಕ ಕಿರುಕುಳ ನೀಡಿದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದಲ್ಲಿ ಘಟನೆ ನಡೆದಿದೆ.
ಬಂಟ್ವಾಳದ ಅಗ್ರಾರ್ ನಿವಾಸಿಯಾಗಿದ್ದು ಮಂಗಳೂರು ಕಾಲೇಜಿಗೆ ತೆರಳುವ ಸಮಯದಲ್ಲಿ ಬಿಸಿರೋಡು ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ವಿದ್ಯಾರ್ಥಿನಿ ಕಾಲೇಜಿಗೆ ಹೋಗುವ ಉದ್ದೇಶದಿಂದ ಕೆ.ಎಸ್.ಆರ್.ಟಿ.ಸಿ ಬಸ್ ಹತ್ತುವ ಸಮಯದಲ್ಲಿ ಹಿಂಬದಿಯಿಂದ ಇದ್ದ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾನೆ.
ಈ ಬಗ್ಗೆ ಪ್ರಶ್ನಿಸಿದಾಗ ಆತ ವಿದ್ಯಾರ್ಥಿನಿ ಗೆಬೆದರಿಸಿದ್ದಲ್ಲದೆ, ಮುಂದೆಯೇ ಇದೇ ರೀತಿ ಕಿರುಕುಳ ನೀಡುತ್ತೇನೆ ಏನು ಮಾಡುತ್ತಿ ಎಂದು ಹೆದರಿಸಿದ್ದಾನೆ ಎಂದು ಹೇಳಲಾಗಿದೆ.
ಈ ಬಗ್ಗೆ ನಿರ್ವಾಹಕನಿಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಪ್ರಯಾಣಿಕ ಹಾಗೂ ನಿರ್ವಾಹಕನ ನಡುವೆ ಮಾತು ಬೆಳೆದಿದೆ ಎನ್ನಲಾಗಿದೆ.ಬಸ್ ನಲ್ಲಿ ನಡೆದ ಘಟನೆ ಬಗ್ಗೆ ಸ್ಥಳದಿಂದಲೇ ವಿದ್ಯಾರ್ಥಿನಿ ಪೋನ್ ಮಾಡಿ ಮನೆಯವರಿಗೆ ವಿಷಯ ತಿಳಿಸಿದ್ದಾಳೆ.

Post a Comment