ಮಸೀದಿಗೆ ಮಂಗಳಾರತಿ ಮಾಡಿದ ಹಿಂದೂ ಕಾರ್ಯಕರ್ತರ ಮೇಲೆ ಕೇಸ್ !
ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿಯೊಂದರ ಬಾಗಿಲಿಗೆ ಆರತಿ ಬೆಳಗಿ, ಹಿಂದೂ ದೇವರ ಹೆಸರಲ್ಲಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಐವರನ್ನು ಬಂಧಿಸಿದ ಘಟನೆ ಗಂಗಾವತಿಯಲ್ಲಿ ನಡೆದಿದೆ.
ಈ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಅತ್ತ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಐದು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಯಮನೂರ ರಾಠೋಡ, ರೌಡಿಶೀಟರ್‌ಗಳಾದ ಶ್ರೀಕಾಂತ ಹೊಸಕೇರಿ, ಕುಮಾರ ಹೂಗಾರ, ಚೆನ್ನಬಸವ ಹೂಗಾರ ಹಾಗೂ ಸಂಗಮೇಶ ಅಯೋಧ್ಯ ವಿರುದ್ಧ ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಿಕೊಂಡಿದ್ದಾರೆ.
ಸೆ. 28ರಂದು ಗಣಪತಿ ವಿಸರ್ಜನೆ ಮೆರವಣಿಗೆ ಜಾಮೀಯ ಮಸೀದಿ ಬಳಿ ಬರುತ್ತಿದ್ದಂತೆಯೇ ಮಸೀದಿ ಬಾಗಿಲಿಗೆ ಆರತಿ ಬೆಳಗಿದ್ದಾರೆ. ಗಲಭೆ ಮಾಡುವ ಉದ್ದೇಶದಿಂದ ಜೈಶ್ರೀರಾಮ್, ಭಾರತ ಮಾತಾಕೀ ಜೈ, ಗವಿ ಗಂಗಾಧರೇಶ್ವರ ಮಹಾರಾಜ ಕೀ ಜೈ ಎನ್ನುವ ಘೋಷಣೆಗಳನ್ನು ಕೂಗಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
.jpg)
Post a Comment