ಬೈಂದೂರು ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟನೆ
ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಹಾಗೂ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಕೊಲ್ಲೂರು ಇವರ ಸಹಯೋಗದಲ್ಲಿ ಬೈಂದೂರು ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಎರಡು ದಿನಗಳ ಕ್ರೀಡಾಕೂಟಕ್ಕೆ ಕೊಲ್ಲೂರು ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆಯಿತು.
.jpeg)

ಕೊಲ್ಲೂರು ಮೂಕಾಂಬಿಕಾ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ ಕೆರಾಡಿ ಅಧ್ಯಕ್ಷತೆ ವಹಿಸಿ, ಉದ್ಘಾಟಿಸಿ ಮಾತನಾಡಿ, ಕ್ರೀಡಾಪಟುಗಳು ತಮ್ಮ ಕ್ರೀಡೆಗಳನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ ಎಂದರು. ತಾಲೂಕು, ಜಿಲ್ಲಾ, ರಾಜ್ಯ ಮಟ್ಟದಲ್ಲಿ ಕ್ರೀಡೆಗಳಲ್ಲಿ ಗೆಲುವು ಸಾಧಿಸಿ ಕ್ಷೇತ್ರಕ್ಕೆ ಕೀರ್ತಿ ತರಬೇಕು. ಕ್ರೀಡಾಪಟುಗಳು ಕ್ರೀಡಾ ಸ್ಪೂರ್ತಿಯಿಂದ ಕ್ರೀಡೆಯಲ್ಲಿ ಭಾಗವಹಿಸಿ ರಾಷ್ಟ್ರ- ಅಂತರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸುವಂತಹ ಕ್ರೀಡಾಪಟುಗಳಾಗಬೇಕು ಎಂದರು.
ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ಕೆ. ನಾಯ್ಕ್ ಪಥ ಸಂಚಲನದ ವಂದನಾ ಸ್ವೀಕರಿಸಿದರು. ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ ಉದಯ ಶೇರುಗಾರ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆಯ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯೋಪಾಧ್ಯಾಯ ಬಿ. ಕರುಣಾಕರ ಶೆಟ್ಟಿ ಕ್ರೀಡಾ ಜ್ಯೋತಿಯನ್ನು ಬೆಳಗಿಸಿದರು.
ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರತ್ನಾ ರಮೇಶ್ ಕುಂದರ್, ಸಂಧ್ಯಾ ರಮೇಶ್, ಡಾ ಅತುಲ್ ಕುಮಾರ್ ಶೆಟ್ಟಿ,ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಉಪಾಧ್ಯಕ್ಷ ರವಿಶಂಕರ್ ಹೆಗ್ಡೆ, ದೈಹಿಕ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ರಾಜಾರಾಮ ಶೆಟ್ಟಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಸಂಘದ ಅಧ್ಯಕ್ಷ ಸುರೇಂದ್ರ ಶೆಟ್ಟಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸದಾನಂದ ಶೆಟ್ಟಿ, ಕೊಲ್ಲೂರು ಗರುಡ ಫ್ರೆಂಡ್ಸ್ ಗೌರವಾಧ್ಯಕ್ಷ ಪ್ರಕಾಶ್ ಪೂಜಾರಿ, ಬೈಂದೂರು ತಾಲೂಕು ಯುವ ಜನ ಕ್ರೀಡಾ ಇಲಾಖೆಯ ಯೋಜನಾಧಿಕಾರಿ ಪ್ರಭಾಕರ್ ಎಸ್, ತಾ.ಪಂ ಮಾಜಿ ಸದಸ್ಯೆ ಗ್ರೀಷ್ಮಾ ಗಿರಿಧರ್ ಭೀಡೆ, ಕೊಲ್ಲೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶಿವರಾಮಕೃಷ್ಣ ಭಟ್ ಕೊಲ್ಲೂರು, ಕೊಲ್ಲೂರು ಉದ್ಯಮಿ ಕೆ ರಮೇಶ್ ಗಾಣಿಗ, ಕೊಲ್ಲೂರು ದೇವಳದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಜಿ ಸಿ ವೇದಿಕೆಯಲ್ಲಿ ಇದ್ದರು.
ರಾಷ್ಟ್ರೀಯ ಕ್ರೀಡಾಪಟು ಮಂಜುನಾಥ್ ಮರಾಠಿ, ಆದರ್ಶ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸಂತೋಷ್ ಕುಮಾರ್ ಶೆಟ್ಟಿ, ಗರುಡ ಫ್ರೆಂಡ್ ಕೊಲ್ಲೂರು ಅಧ್ಯಕ್ಷ ಪವನ್ ಗಾಣಿಗ ಸನ್ಮಾಸಿ ಗೌರವಿಸಲಾಯಿತು.

.jpeg)
.jpeg)
ಮುಖ್ಯೋಪಾಧ್ಯಾಯ ನಾಗರಾಜ್ ಭಟ್ ಸ್ವಾಗತಿಸಿದರು, ಬೀಸಿನಪಾರೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಾಜೀವ ಶೆಟ್ಟಿ, ಹೊಸೂರು ಪ್ರೌಢಶಾಲಾ ಶಿಕ್ಷಕಿ ಕೀರ್ತನಾ ಶೆಟ್ಟಿ ನಿರೂಪಿಸಿದರು, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು, ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ವಂದಿಸಿದರು.



.jpeg)
Post a Comment