".

Header Ads

ಕಾರ್ಕಳ: ವಾಹನ ಡಿಕ್ಕಿ ಹೊಡೆದು ಚಿರತೆ ಮೃತ್ಯು


ವೇಗವಾಗಿ ಸಾಗುತಿದ್ದ ಕಾರಿಗೆ ಡಿಕ್ಕಿ ಹೊಡೆದು ಚಿರತೆ ಸಾವಿಗೀಡಾದ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಕಾರ್ಕಳ ರಸ್ತೆಯ ಭಕ್ರೆ ಮಠ ಕ್ರಾಸ್ ಬಳಿ ಗುರುವಾರ ಸಂಜೆ ನಡೆದಿದೆ.

ಕಾರ್ಕಳದಿಂದ ಮುದ್ರಾಡಿಕಡೆಗೆ ವೇಗವಾಗಿ ಸಾಗುತಿದ್ದ ಇನ್ನೋವಾ ಕಾರು ಚಿರತೆಗೆ ಢಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

 

Powered by Blogger.