".

Header Ads

ಬೆಳ್ತಂಗಡಿ: ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರಿ ಮೇಲೆ ಕಾಡಾನೆ ದಾಳಿ, ಇಬ್ಬರಿಗೆ ಗಾಯ


 
ಕಾರೊಂದರ ಮೇಲೆ ಕಾಡಾನೆಯೊಂದು ದಾಳಿ ಮಾಡಿ ಇಬ್ಬರನ್ನು ಗಾಯಗೊಳಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದ ಅಣಿಯೂರಿನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಕಾರಿನಲ್ಲಿ ಆರು ಮಂದಿಯಿದ್ದು ಅವರು ನೆರಿಯದ ಸಂಬಂಧಿಕರ ಮನೆಗೆ ಪ್ರಯಾಣಿಸುತ್ತಿದ್ದರು.
ಪುತ್ತೂರು ಮೂಲದ ಅಬ್ದುಲ್ ರೆಹಮಾನ್ (40) ಮತ್ತು ನಾಸಿಯಾ (30) ಗಾಯಾಳುಗಳು ಎಂದು ತಿಳಿದು ಬಂದಿದೆ. ರೆಹಮಾನ್ ಅವರ ತಲೆ ಮತ್ತು ಕಾಲಿಗೆ ಹಾಗೂ ನಾಸಿಯಾ ಅವರ ಕಾಲಿಗೆ ಗಾಯವಾಗಿದೆ. ಗಾಯಗೊಂಡವರಿಗೆ ಕಕ್ಕಿಂಜೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.ಬೆಳ್ತಂಗಡಿ ತಾಲೂಕಿನ ಹಲವು ಗ್ರಾಮಗಳು ಅರಣ್ಯ ಪ್ರದೇಶದ ಪಕ್ಕದಲ್ಲಿದ್ದು ಇಲ್ಲಿ ಕಾಡಾನೆಗಳ ಹಾವಳಿ ನಿತ್ಯ ನಿರಂತರ. ಈ ಕಾಡಾನೆಗಳು ನಾಡಿಗೆ ದಾಳಿಯಿಟ್ಟ ಸಂದರ್ಭ ಕೃಷಿಗೆ ಹಾನಿ ಉಂಟು ಮಾಡುತ್ತಿದ್ದವೇ ಹೊರತು ವಾಹನದ ಮೇಲೆ ಅಥಾವ ಮನುಷ್ಯನ ಮೇಲೆ ಹಾನಿ ಮಾಡಿದ ನಿದರ್ಶನಗಳು ಈ ಭಾಗದಲ್ಲಿ ಇರಲಿಲ್ಲ ಎನ್ನಲಾಗುತ್ತಿದೆ. ಆದರೆ ಇತ್ತೀಚೆಗೆ ಮನುಷ್ಯರ ಮೇಲೆ ದಾಳಿ ಹೆಚ್ಚಾಗಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಸೊಕ್ತ ಕ್ರಮ ಕೈಗೊಳ್ಳಬೇಕಾಗಿ ಸ್ಥಳೀಯರ ಅಗ್ರಹವಾಗಿದೆ.
Powered by Blogger.