ದೇಶದ್ಯಾಂತ ಹಲಾಲ್ ನಿಷೇಧದ ಕುರಿತು ಮಹತ್ವದ ಅಪ್‌ಡೇಟ್ ಕೊಟ್ಟ ಅಮಿತ್ ಶಾ! ಇಲ್ಲಿದೆ ಮಾಹಿತಿ
ಉತ್ತರ ಪ್ರದೇಶದಲ್ಲಿ ಹಲಾಲ್ ಪ್ರಮಾಣಪತ್ರ ಇರುವ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದ ಬೆನ್ನಲ್ಲೇ ಹಲಾಲ್ ಪ್ರಮಾಣಪತ್ರ ಇರುವ ಉತ್ಪನ್ನಗಳ ನಿಷೇಧದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹತ್ವದ ಅಪ್‌ಡೇಟ್ ನೀಡಿದ್ದಾರೆ.
“ದೇಶಾದ್ಯಂತ ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ನಿಷೇಧದ ಕುರಿತು ಕೇಂದ್ರ ಸರ್ಕಾರ ಇದುವರೆಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ” ಎಂದು ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರವು ದೇಶಾದ್ಯಂತ ನಿಷೇಧ ಮಾಡುತ್ತದೆ ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದಾರೆ.
ಹೈದರಾಬಾದ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಮಿತ್ ಶಾ ಅವರು ಈ ಕುರಿತು ಮಾಹಿತಿ ನೀಡಿದರು. “ಹಲಾಲ್ ಪ್ರಮಾಣಪತ್ರ ಇರುವ ಉತ್ಪನ್ನಗಳ ಮಾರಾಟ, ಸಂಗ್ರಹಣೆ, ಸಾಗಣೆಯ ನಿಷೇಧದ ಕುರಿತು ಕೇಂದ್ರ ಸರ್ಕಾರ ಇದುವರೆಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ” ಎಂದು ತಿಳಿಸಿದರು.
ಆದರೆ, ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ನಿಷೇಧದ ಕುರಿತು ಮುಂದಿನ ದಿನಗಳಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂಬುದರ ಕುರಿತು ಅಮಿತ್ ಶಾ ಅವರು ಯಾವುದೇ ಮಾಹಿತಿ ನೀಡಿಲ್ಲ. ನವೆಂಬರ್ 30ರಂದು ತೆಲಂಗಾಣ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಮಿತ್ ಶಾ ಅವರು ಸಾಲು ಸಾಲು ಚುನಾವಣೆ ರ‍್ಯಾಲಿಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
Post a Comment