ದಕ್ಷಿಣ ಕನ್ನಡದ ನೆಲ್ಯಾಡಿ ಬಳಿ ಅಪಹರಣಕಾರರನ್ನು ಪತ್ತೆ ಹಚ್ಚಿದ ಹಾಸನ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು, ಕಿಡ್ನಾಪ್ ಗೊಳಗಾದ ಶಾಲಾ ಶಿಕ್ಷಕಿಯನ್ನು ಹಾಸನಕ್ಕೆ ಕರೆದೊಯ್ದಿದ್ದಾರೆ.
ಪ್ರಕರಣದ ಹಿನ್ನಲೆ:
ನ.30 ರಂದು ಬೆ .ಶಿಕ್ಷಕಿ ಅರ್ಪಿತಾ ಬೆಳಿಗ್ಗೆ ಶಾಲೆಗೆ ತೆರಳಲು ಸಿದ್ಧವಾಗಿದ್ದಳು. ಈ ವೇಳೆ ದುರುಳರು ಆಕೆಯನ್ನು ಅಪಹರಣ ಮಾಡಿದ್ದಾರೆ. ಅರ್ಪಿತಾ ಸಂಬಂಧಿ ರಾಮು ಎಂಬಾತನಿಂದಲೇ ಈ ಕೃತ್ಯ ನಡೆದಿದೆ ಎಂದು ಯುವತಿ ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ಹದಿನೈದು ದಿನಗಳ ಹಿಂದೆ ರಾಮು ಮತ್ತು ಪೋಷಕರು ಮದುವೆ ಪ್ರಸ್ತಾಪದೊಂದಿಗೆ ಯುವತಿ ಮನೆಗೆ ಬಂದಿದ್ದರು. ಮದುವೆ ಮಾಡಿಕೊಡಲು ಒಪ್ಪದ ಹಿನ್ನೆಲೆಯಲ್ಲಿ ಯುವತಿಯನ್ನೇ ಕಿಡ್ನಾಪ್ ಮಾಡಿದ್ದಾರೆ ಎನ್ನಲಾಗುತ್ತಿದೆ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆರೋಪಿ ಪತ್ತೆಗಾಗಿ ಮೂರು ತಂಡ ರಚನೆ ಮಾಡಿ ಕಾರ್ಯಾಚರಣೆ ನಡೆಸಿದ್ದರು. ಮೋಬೈಲ್ ನೆಟ್ ವರ್ಕ್ ಆಧಾರಿಸಿ ಆರೋಪಿ ರಾಮು ಹಾಗೂ ಆತನ ಗ್ಯಾಂಗ್ ನ್ನು ಪೊಲೀಸರು ಬಂಧಿಸಿದ್ದಾರೆ.
Post a Comment