ಬೈಲೂರು : – ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ -ಸಹಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ
ಬೈಲೂರಿನ ಗೋವಿಂದೂರು ಕ್ರಾಸ್ ಬಳಿ ಖಾಸಗಿ ಬಸ್ ಒಂದಕ್ಕೆ ದ್ವಿಚಕ್ರ ವಾಹನ ದಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಿನ್ನೆ ನಡೆದಿದೆ, ಹಾಗೂ ಸಹಸವಾರ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು
ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಮಂಗಳೂರು ಆಸ್ಪತ್ರೆಯಲ್ಲಿ ಮಂಜುನಾಥ್
ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದ ಕೊಕೈಕಲ್ ನಿವಾಸಿ ನಾಗರಾಜ ಹಾಗೂ ಮಂಜುನಾಥ ಮೃತ ದುರ್ದೈವಿಗಳು ಎಂದು ತಿಳಿಯಲಾಗಿದೆ.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post a Comment