".

Header Ads

ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಕೊಲ್ಲೂರು ಇಲ್ಲಿನ ಶಾಲಾ ವಾರ್ಷಿಕ ಕ್ರೀಡಾಕೂಟ


 
ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಕೊಲ್ಲೂರು ಇಲ್ಲಿನ ಶಾಲಾ ವಾರ್ಷಿಕ ಕ್ರೀಡಾಕೂಟ ಬುಧವಾರ ನಡೆಯಿತು.






ಸಂಸ್ಥೆಯ ಹಳೆ ವಿದ್ಯಾರ್ಥಿ ಬೆಂಗಳೂರು ಸೆನ್ ಪೊಲೀಸ್ ಠಾಣಾಧಿಕಾರಿ ಪ್ರವೀಣ್ ಎಸ್ ಪಥ ಸಂಚಲನದ ಗೌರವ ವಂದನೆ ಸ್ವೀಕರಿಸಿ ಕಾರ್ಯಕ್ರಮವನ್ನು ದೀಪಬೆಳಗಿಸಿ ಉದ್ಘಾಟಿಸಿ ಮಾತನಾಡಿ ಸಾಧನೆಯ ಉತ್ತುಂಗಕ್ಕೆ ಕ್ರೀಡೆಯ ಒಂದು ಪ್ರಮುಖ ಹಂತ ಎಂದರು.

ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ ಶೇರುಗಾರ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.

ಕೊಲ್ಲೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾಗೇಶ್ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದರು.

ಸಂಸ್ಥೆಯ ಹಳೆ ವಿದ್ಯಾರ್ಥಿ ಬೆಂಗಳೂರು ಯಶವಂತಪುರ ಬಾಪು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಮಹೇಂದ್ರ ಎಸ್ ಕ್ರೀಡಾ ಜ್ಯೋತಿ ಬೆಳಗಿಸಿದರು.


ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಉಪಾಧ್ಯಕ್ಷ ರವಿಶಂಕರ್ ಹೆಗ್ಡೆ, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಜಿ.ಬಿ , ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ವೇದಿಕೆಯಲ್ಲಿ ಇದ್ದರು.


ಸಂಸ್ಥೆಯ ಹಳೆ ವಿದ್ಯಾರ್ಥಿ ಬೆಂಗಳೂರು ಸೆನ್ ಪೊಲೀಸ್ ಠಾಣಾಧಿಕಾರಿ ಪ್ರವೀಣ್ ಎಸ್ ಮತ್ತು ಸಂಸ್ಥೆಯ ಹಳೆ ವಿದ್ಯಾರ್ಥಿ ಬೆಂಗಳೂರು ಯಶವಂತಪುರ ಬಾಪು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಮಹೇಂದ್ರ ಎಸ್ ಅವರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯ ನಾಗರಾಜ್ ಭಟ್ ಸ್ವಾಗತಿಸಿದರು‌, ಬೀಸಿನಪಾರೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಾಜೀವ ಶೆಟ್ಟಿ ಮತ್ತು ಕಾಲೇಜಿನ ಉಪನ್ಯಾಸಕ ನಾಗರಾಜ್ ಅಡಿಗ ನಿರೂಪಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ ಧನ್ಯವಾದ ಸಲ್ಲಿಸಿದರು.

Powered by Blogger.