".

Header Ads

ಪುತ್ತೂರು: ರನ್ನಿಂಗ್‌ ರೇಸ್‌ನಲ್ಲಿ ಸೋಲು: ಸಾವಿಗೆ ಶರಣಾದ ಪಿಯು ವಿದ್ಯಾರ್ಥಿನಿ

 


ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ವಿಚಾರಕ್ಕೆ ಮನನೊಂದು ವಿದ್ಯಾರ್ಥಿನಿ ಸಾವಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿದಲ್ಲಿ ನಡೆದಿದೆ. ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಶಾ(17) ಮೃತ ದುರ್ದೈವಿ.

ಮೃತ ನಿಶಾ ಅಥ್ಲೆಟಿಕ್‌ ಆಗಿದ್ದು, ರನ್ನಿಂಗ್ ರೇಸ್‌ನಲ್ಲಿ ಕಳೆದ ಕೆಲ ವರ್ಷಗಳಿಂದ ಮೈಲುಗೈ ಸಾಧಿಸಿದ್ದಳು. ಈ ಬಾರಿ ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದಳು. ರನ್ನಿಂಗ್ ರೇಸ್‌ನಲ್ಲಿ ಸೋಲುಕಂಡಿದಕ್ಕೆ ತೀವ್ರ ಬೇಸರಗೊಂಡಿದ್ದ ನಿಶಾಬ ಳಿಕ ಖಿನ್ನತೆಗೊಳಗಾಗಿದ್ದಾಳೆ ಎನ್ನಲಾಗಿದೆ.

ಬಹುಮಾನ ಸಿಗದಿದ್ದಕ್ಕೆ ಬೇಸರಗೊಂಡಿದ್ದ ಕಳೆದ ವಾರ ನಿಶಾ ತೋಟಕ್ಕೆ ಸಿಂಪಡಿಸುವ ಕೀಟನಾಶವನ್ನ ಸೇವಿಸಿದ್ದಾಳೆ. ಬಳಿಕ ತೀವ್ರ ವಾಂತಿಯಾಗುತ್ತಿದ್ದ ಕಾರಣಕ್ಕೆ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿದ ವಿಚಾರ ತಿಳಿದು ಬಂದಿದ್ದು, ಕೂಡಲೇ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ನಿಶಾಳನ್ನು ಪರೀಕ್ಷಿಸಿದ ವೈದ್ಯರು ಪುತ್ತೂರಿನಿಂದ ಮಂಗಳೂರಿಗೆ ಕೊಂಡೊಯ್ಯುವಂತೆ ತಿಳಿಸಿದ್ದಾರೆ.

ಕಳೆದ ಒಂದು ವಾರದಿಂದ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿಶಾ ಭಾನುವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Powered by Blogger.