".

Header Ads

ಖ್ಯಾತ ನಾಗಸ್ವರ ವಾದಕ ಜಲೀಲ್ ಸಾಹೇಬ್ ಹೃದಯಾಘಾತದಿಂದ ನಿಧನ


  ಕಾಪು ಕೊಪ್ಪಲಂಗಡಿಯ ನಿವಾಸಿಯಾಗಿರುವ ಈ ಪರಿಸರದ ಖ್ಯಾತ ನಾಗಸ್ವರ ವಾದಕರ ಹತ್ತಾರು ದೇವಸ್ಥಾನ ದೈವಸ್ಥಾನದಲ್ಲಿ ಸೇವೆ ಸಲ್ಲಿಸಿದ್ದ ಜಲೀಲ್ ಸಾಹೇಬ್ ದಿಢೀರ್ ಸಂಭವಿಸಿದ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಾಪು ಪರಿಸರ ಮಾತ್ರವಲ್ಲದೆ ಹತ್ತಾರು ದೇವಸ್ಥಾನ ದೈವಸ್ಥಾನದಲ್ಲಿ ನಾಗಸ್ವಾರ ( ವಾದ್ಯ) ವಾದಕರಾಗಿ ಸೇವೆ ಸಲ್ಲಿಸುತ್ತಿದ್ದ ಸಾಹೇಬರಿಗೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಜಲೀಲ್ ಸಾಹೇಬ್ ಅವರು ಶನಿವಾರ ಕೊಪ್ಪಲಂಗಡಿಯಲ್ಲಿ ನಡೆದ ಮುಳ್ಳಮುಟ್ಟೆ,  ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ದೀಪಾವಳಿ ಸಂಭ್ರಮ ಮತ್ತು ಬಲಿ ಹೊರಡುವ ಸಂದರ್ಭದಲ್ಲೂ ನಾಗಸ್ವರ ಸೇವೆ ನೀಡಿದ್ದರು. ಸೋಮವಾರ ಮುಂಜಾನೆ ನಾಗಸ್ವರ ಹೆಗಲಿಗೇರಿಸಿಕೊಂಡು ಮನೆಯಿಂದ ಹೊರಗೆ ಹೋಗಿದ್ದು, ಹೋಟೇಲ್ ನಲ್ಲಿ ಚಹಾ ಕುಡಿಯಲು ಕುಳಿತಿದ್ದ ವೇಳೆ ಹೃದಯಾಘಾ ತಕ್ಕೊಳಗಾಗಿದ್ದರು. ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ

Powered by Blogger.