ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಬಂಟ್ವಾಳದ ಧನೇಶ್ ಶೆಟ್ಟಿ ಆಯ್ಕೆ
ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕ ಇಂಡೋನೇಶ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.ಕುಕ್ಕಿಪ್ಪಾಡಿ ಹುಣಸೆಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಅವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಶ್ಯಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು.
ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಶ್ಯಾದಲ್ಲಿ ನೆಲೆಸಿದ್ದು, ಆರೋಗ್ಯ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ನಲ್ಲಿ ಆಸಕ್ತಿ ಹೊಂದಿದ್ದ ಇವರು ಇದೀಗ ಇಂಡೋನೇಸ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
Post a Comment