".

Header Ads

ಶಾಲೆಗಳಿಗೆ 'ಬಾಂಬ್ ಬೆದರಿಕೆ' ಇಮೇಲ್‌ನಲ್ಲಿ 'ಮತಾಂತರಕ್ಕೆ ಆಗ್ರಹ'

 

 
ಸಿಲಿಕಾನ್ ಸಿಟಿಯ 60ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಇಂದು ಬೆಳ್ಳಂಬೆಳಿಗ್ಗೆ ಬಾಂಬ್ ಬೆದರಿಕೆ ಕರೆ ಬಂದಿರುವುದು ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರಲ್ಲಿ ನಡುಕ ಹುಟ್ಟಿಸಿದೆ. ಈ ಸುದ್ದಿ ಬಹಿರಂಗವಾಗುತ್ತಿದ್ದಂತೆ ಗಾಬರಿಗೊಂಡ ಪೋಷಕರು ಶಾಲೆಯತ್ತ ದೌಡಾಯಿಸಿ ತಮ್ಮ ಮಕ್ಕಳನ್ನು ಧಾವಂತದಲ್ಲಿ ಮನೆಯತ್ತ ಕರೆದೊಯ್ದರು. ಮೇಲ್ನೋಟಕ್ಕೆ ಈ ಬಾಂಬ್ ಬೆದರಿಕೆಯ ಹಿಂದೆ ಉಗ್ರಗಾಮಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದು, ನಿಖರ ಮಾಹಿತಿ ತಿಳಿಯಲಿದೆ.

ಮುಜಾಹಿದ್ದಿನ್ ಹೆಸರಿನಲ್ಲಿ ಬಂದಿರುವ ಇ-ಮೇಲ್ ಬಾಂಬ್ ಬೆದರಿಕೆ ಕರೆ ಮಾಡಿ ಕೆಲವು ಅಂತರರಾಷ್ಟ್ರೀಯ ವಿಚಾರ ಪ್ರಸ್ತಾವಿಸಿರುವುದರಿಂದ ಉಗ್ರಗಾಮಿಗಳ ಕೃತ್ಯ ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಹಿಂದೆಯೂ ಬೆಂಗಳೂರಿನ ಶಾಲೆಗಳಿಗೆ ಈ ರೀತಿಯ ಬಾಂಬ್ ಬೆದರಿಕೆ ಕರೆ ಬಂದಿತ್ತು, ಇದೀಗ ಮತ್ತೆ ಈ ಬಾಂಬ್ ಬೆದರಿಕೆ ಕರೆ ಪುನರಾವರ್ತನೆಯಾಗಿರುವುದು ಬೆಂಗಳೂರಿನ ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ.ಬಸವೇಶ್ವರ ನಗರ, ಯಲಹಂಕ, ಸದಾಶಿವನಗರ ಸೇರಿದಂತೆ ವಿವಿಧ ಪ್ರದೇಶದ 60 ಕ್ಕೂ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶವು ಬೆಳಿಗ್ಗೆ 9 ರ ಸುಮಾರಿಗೆ ಬಂದಿದ್ದು ಈ ಸುದ್ದಿಯು ಕೆಲವೇ ನಿಮಿಷಗಳಲ್ಲಿ ಎಲ್ಲೆಡೆ ಹರಡಿ ಶಾಲೆಗಳತ್ತ ಪೋಷಕರು ದೌಡಾಯಿಸಿದರು.

ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಾರದಿದ್ದ ಶಾಲೆಗಳ ಬಳಿಯೂ ಪೋಷಕರು ಜಮಾಯಿಸಿ ಮಕ್ಕಳನ್ನು ಕಳುಹಿಸುವಂತೆ ಪಟ್ಟು ಹಿಡಿದಿದ್ದರಿಂದ ಶಿಕ್ಷಕರು ಅನಿವಾರ್ಯವಾಗಿ ಮನೆಗೆ ಕಳುಹಿಸಿಕೊಟ್ಟರು.ಬಸವೇಶ್ವರ ನಗರದ ನ್ಯಾಷನಲ್, ವಿದ್ಯಾಶಿಲ್ಪ,ಸದಾಶಿವನಗರದ ಪೂರ್ಣ ಪ್ರಜ್ಞ ,ಯಲಹಂಕದ ಶಾಲೆಗಳು ಸೇರಿದಂತೆ 60 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದಾರೆ.

ಬಸವೇಶ್ವರ ನಗರ, ಯಲಹಂಕ, ಸದಾಶಿವ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಕೂಡಲೇ ಶಾಲೆಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ದೌಡಾಯಿಸಿ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.

ಕೂಡಲೇ ಶಾಲೆಗಳಿಗೆ ಬಂದ ಪೋಷಕರು ಭಯದಿಂದ ತಮ್ಮ ಮಕ್ಕಳನ್ನು ಕರೆದುಕೊಂಡು ಹೋಗಿದ್ದಾರೆ. 


 ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿರುವುದರ ಹಿಂದೆ ಹೈಲೆವೆಲ್ ಉಗ್ರರ ಕೈವಾಡ ಇದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್

 

ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿರುವುದರ ಹಿಂದೆ ಹೈಲೆವೆಲ್ ಉಗ್ರರ ಕೈವಾಡ ಇದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ ವಿಚಾರವಾಗಿ ಮಾತನಾಡಿದ ಅವರು, ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ​ ಜತೆ ಮಾತನಾಡಿದ್ದೇನೆ. ಅಲ್ಲಾಗೆ ಮೋಸ ಮಾಡುತ್ತಿದ್ದಾರೆಂದು ಇ-ಮೇಲ್ ಪತ್ರದಲ್ಲಿ​ ಉಲ್ಲೇಖವಾಗಿದೆ. ಧರ್ಮಾಧರಿತವಾಗಿ ಬಾಂಬ್ ಬೆದರಿಕೆ ಹಾಕಿದ್ದಾರೆ. ಬಾಂಬ್ ಬೆದರಿಕೆ ಹಿಂದೆ ದೊಡ್ಡ ಜಾಲ ಇರುವ ಬಗ್ಗೆ ಗೊತ್ತಾಗುತ್ತಿದೆ. ಉಗ್ರವಾದ ಅರ್ಥದಲ್ಲಿ ಇ-ಮೇಲ್ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದರು.


Powered by Blogger.