".

Header Ads

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ – ಎರಡು ಮಕ್ಕಳ ತಂದೆ ಆರೋಪಿ ಅಬ್ದುಲ್ಲಾ ಬಂಧನ…!

 ಅಪ್ರಾಪ್ತ ಬಾಲಕನಿಗೆ ಅನ್ಯ ಕೋಮಿನ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಕ್ಕಳ ಸಹಾಯವಾಣಿಯ ಮೂಲಕ ಸಲ್ಲಿಸಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ದೋರ್ಮೆ ಎಂಬಲ್ಲಿನ ಅಬ್ದುಲ್ಲಾ ಬಿಳಿಯೂರು (36 ವ.) ಎಂದು ಗುರುತಿಸಲಾಗಿದೆ. ಎರಡು ಮಕ್ಕಳ ತಂದೆಯಾಗಿರುವ ಈತ 13 ವರ್ಷದ ಬಾಲಕನನ್ನು ಮನೆಯಲ್ಲಿ ಕೆಲಸವಿದೆ ಎಂದು ಹಾಗೂ ಸ್ಕೂಟಿ ಸವಾರಿ ಹೇಳಿ ಕೊಡುತ್ತೇನೆಂದು ಕರೆಸಿ ವಿವಿಧ ದಿನಗಳಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ನೊಂದ ಬಾಲಕ ಶಾಲೆಯಲ್ಲಿ ನೀಡಿದ ಮಾಹಿತಿಯಂತೆ ಮಕ್ಕಳ ಸಹಾಯವಾಣಿಗೆ ಕರೆಮಾಡಿ ತಿಳಿಸಿದ್ದರು. ಅವರ ಸಲಹೆಯಂತೆ ತನ್ನ ತಾಯಿಯೊಂದಿಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ ತನ್ನ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ಬಾಲಕ ದೂರು ಸಲ್ಲಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Powered by Blogger.