".

Header Ads

BIG BREAKING : ಉಡುಪಿ , ಮಂಗಳೂರು ಜಿಲ್ಲೆಗಳಲ್ಲಿ ʻಲೋಕಾಯುಕ್ತʼ ದಾಳಿ

 

 ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಮಂಗಳೂರು, ಉಡುಪಿ ಸೇರಿದಂತೆ ಹಲವಡೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು, ಉಡುಪಿ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಸರ್ವೆ ಇಲಾಖೆ ಕಚೇರಿ, ನಿವಾಸಗಳ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಮಂಗಳೂರು, ಉಳ್ಳಾರ. ಬಂಟ್ವಾಳ,ಕಾರ್ಕಳ ಸೇರಿದಂತೆ ಹಲವು ಸ್ಥಳಗಳಲ್ಲಿ ಲೋಕಾಯುಕ್ತ ಎಸ್‌ ಪಿ ನಟರಾಜ್‌ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಡಿಡಿಎಲ್ ಆರ್ ಎಡಿಎಲ್ ಆರ್ ಕಚೇರಿ ನಿವಾಸಗಳ ಮೇಲೆ ದಾಳಿ ಮಾಡಿದ್ದು, ಸರ್ವೆ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮನೆಗಳ ಮೇಲೆ ಕೂಡ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗ್ಗೆ 7ರಿಂದ ಲೋಕಾಯುಕ್ತ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.ಸಾರ್ವಜನಿಕರಿಂದ ವ್ಯಾಪಕ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಲೋಕಾಯುಕ್ತ ಎಸ್ಪಿ ನಟರಾಜ ನೇತೃತ್ವದಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Powered by Blogger.