ಲೋಕಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಮರು ಆಯ್ಕೆ
ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಲೋಕಸಭೆಯ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆದು ಓಂ ಬಿರ್ಲಾ ಅವರನ್ನು ಸ್ಪೀಕರ್ ಆಗಿ ಮರು ಆಯ್ಕೆಯಾಗಿದ್ದಾರೆ.
ಡೆಪ್ಯುಟಿ ಸ್ಪೀಕರ್ ಸ್ಥಾನವನ್ನು ವಿರೋಧ ಪಕ್ಷಗಳಿಗೆ ಬಿಟ್ಟು ಕೊಡಲು ಆಡಳಿತ ಪಕ್ಷ ಹಿಂದೇಟು ಹಾಕಿದ ಕಾರಣ ವಿರೋಧ ಪಕ್ಷ ಸ್ಪೀಕರ್ ಸ್ಥಾನಕ್ಕೆ ಕಾಂಗ್ರೆಸ್ ನಾಯಕ ಕೆ. ಸುರೇಶ್ ಅವರನ್ನು ಕಣಕ್ಕೆ ಇಳಿಸಿತ್ತು. ಸ್ಪೀಕರ್ ಗೆಲುವಿಗೆ ಬೇಕಾದ ಸಂಖ್ಯಾ ಬಲ ಇದ್ದರೂ ಕೂಡಾ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿ ವಿರೋಧ ಪಕ್ಷ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿತ್ತು.
ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಸಧನದಲ್ಲಿ ಸ್ಪೀಕರ್ ಹುದ್ದೆಗಾಗಿ ಓಂ ಬಿರ್ಲಾ ಅವರನ್ನು ಸೂಚಿಸಿದ್ದರು ಹಾಗೂ . ಹಂಗಾಮಿ ಸ್ಪೀಕರ್ ಭರ್ತೃಹರಿ ಅವರು ಚುನಾವಣಾ ಪ್ರಕ್ರಿಯೆ ನಡೆಸಿ ಓಂ ಬಿರ್ಲಾ ಅವರನ್ನು ಸ್ಪೀಕರ್ ಆಗಿ ಘೋಷಣೆ ಮಾಡಿದ್ದಾರೆ.
Post a Comment