ಗುಜರಾತ್:-ಮಳೆ ಅವಾಂತರ- ನಗರಗಳು ಜಲಾವೃತ- ಕೊಚ್ಚಿಹೋದ ಅಣೆಕಟ್ಟು!
ಗುಜರಾತ್‌ನಲ್ಲಿ ಮಳೆ ಅರ್ಭಟ ಜೋರಾಗಿದ್ದು ಅನೇಕ ನಗರಗಳು ಜಲಾವೃತಗೊಂಡಿವೆ. ಅಲ್ಲದೆ ಹಲವೆಡೆ ಮನೆಗಳು, ವಿದ್ಯುತ್ ಕಂಬ ಹಾಗೂ ಮರಗಳು ಧರೆಗೆ ಉರುಳಿ ಬಿದ್ದಿವೆ. ಲೋನಾವಾಲಾದಲ್ಲಿನ ಅಣೆಕಟ್ಟು ಮಳೆ ನೀರಿನಲ್ಲಿ ಮುಳುಗಿ ಐವರು ಸಾವನ್ನಪ್ಪಿದ್ದಾರೆ. ದೇಶಕ್ಕೆ ಮುಂಗಾರು ಪ್ರವೇಶಿಸಿದೆ.
ಮಾನ್ಸೂನ್ ದೇಶದ ಬಹುತೇಕ ಎಲ್ಲಾ ರಾಜ್ಯಗಳನ್ನು ತಲುಪಿದೆ. ಮುಂದಿನ ಮೂರು ದಿನಗಳಲ್ಲಿ ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣದ ಉಳಿದ ಭಾಗಗಳನ್ನು ಆವರಿಸುವ ನಿರೀಕ್ಷೆಯಿದೆ. ಕಳೆದ 30 ದಿನಗಳಲ್ಲಿ ದೇಶದಲ್ಲಿ ವಾಡಿಕೆಗಿಂತ ಶೇ.11ರಷ್ಟು ಕಡಿಮೆ ಮಳೆಯಾಗಿದೆ. ಆದರೆ, ಈಗ ದೇಶಾದ್ಯಂತ ಧಾರಾಕಾರ ಮಳೆಯಾಗುತ್ತಿದೆ.
ಮಹಾರಾಷ್ಟ್ರ, ಬಿಹಾರ, ರಾಜಸ್ಥಾನ, ಗುಜರಾತ್, ಹರಿಯಾಣ, ಉತ್ತರ ಪ್ರದೇಶ, ಉತ್ತರಾಖಂಡ, ಮಧ್ಯಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ಅರುಣಾಚಲ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾನುವಾರ ಭಾರೀ ಮಳೆಯಾಗಿದೆ.
ಜೊತೆಗೆ ಈಶಾನ್ಯ ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ ಗುಜರಾತ್‌ನಲ್ಲಿ ಭಾರೀ ಮಳೆಯಾಗುತ್ತಿದೆ. ಸೂರತ್, ಭುಜ್, ವಾಪಿ, ಭರೂಚ್ ಮತ್ತು ಅಹಮದಾಬಾದ್ ಪ್ರದೇಶಗಳು ಜಲಾವೃತಗೊಂಡಿವೆ. ಇನ್ನು ನಾಲ್ಕು ದಿನ ರಾಜ್ಯದಲ್ಲಿ ಇದೇ ರೀತಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.
Post a Comment