ಕೊಲ್ಲೂರು:ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನ ದ್ವಿತೀಯ PUC ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು.
ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೊವಾಡಿ ಅವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ 51 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಶುಭ ಹಾರೈಸಿ ಮಾತನಾಡಿ ವಸತಿ ನಿಲಯಗಳನ್ನು ಮಾಡಿಕೊಟ್ಟು ಸಾಕಷ್ಟು ಪ್ರೋತ್ಸಾಹ ಹಾಗೂ ಮಾರ್ಗದರ್ಶನ ಮಾಡುತ್ತಿದ್ದು, ಇಲ್ಲಿ ಕಲಿತ ವಿದ್ಯಾರ್ಥಿಗಳು ದೊಡ್ಡ ದೊಡ್ಡ ಹುದ್ದೆಯನ್ನು ಅಲಂಕರಿಸಿರುವುದು ಶ್ಲಾಘನೀಯ ವಿಷಯವಾಗಿದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಗೋಪಾಲ ಕೃಷ್ಣ ವಹಿಸಿದರು. ಸಂಸ್ಥೆಯ ಉಪನ್ಯಾಸಕರು, ಉಪನ್ಯಾಸಕೇತರ ವೃಂದದವರು ಹಾಗೂ ವಸತಿ ನಿಲಯದ ಮೇಲ್ವಿಚಾರಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು

Post a Comment