".

Header Ads

ಬೆಳ್ತಂಗಡಿ : ತೀವ್ರ ಜ್ವರಕ್ಕೆ 16ವರ್ಷದ ಬಾಲಕಿ ಬಲಿ..!

 


ತೀವ್ರ ಜ್ವರದಿಂದ ಬಾಲಕಿಯೋರ್ವಳು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.  ತಾಲೂಕಿನ  ಶಿಶಿಲ ಗ್ರಾಮದ ಪೆರಿಕೆ ಗ್ರಾಮದ ಕೃಷ್ಣಪ್ಪ ಮಲೆಕುಡಿಯ ಹಾಗೂ ಸುನಂದಾ ದಂಪತಿಯ ಪುತ್ರಿ ಸುಪ್ರೀತಾ (16) ಮೃತ ಬಾಲಕಿಯಾಗಿದ್ದಾಳೆ.

ಸುಪ್ರೀತಾ ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಳು.ಮಂಗಳವಾರ ಆಕೆಯ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು, ತಕ್ಷಣವೇ ಆಕೆಯನ್ನು ಚಿಕಿತ್ಸೆಗಾಗಿ ಉಪ್ಪಿನಂಗಡಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಮನೆಗೆ ಹಿಂದಿರುಗುವ ಮಾರ್ಗ ಮಧ್ಯೆ ಆಕೆ ಪ್ರಜ್ಞಾಹೀನಳಾಗಿದ್ದಳು.

ಮತ್ತೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ವೈದ್ಯರು ಆಕೆ ಮೃತಪಟ್ಟಿರೋದಾಗಿ ತಿಳಿಸಿದ್ದಾರೆ. ಸುಪ್ರೀತಾ ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.

Powered by Blogger.