".

Header Ads

ಉಡುಪಿಯ ಗ್ಯಾಂಗ್ ವಾರ್ ಸದಸ್ಯರಿಗೆ 21 ವರ್ಷದ ಯುವತಿಯಿಂದ ಫೋನ್ ನೀಡಿ ಹಣ ವರ್ಗಾವಣೆ

 


ಉಡುಪಿಯಲ್ಲಿ ಗ್ಯಾಂಗ್ ವಾರ್ ನಡಸಿ ಅರೆಸ್ಟ್ ಅಗಿರುವ ಕಾಪುವಿನ ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಮೂಲದ ಉಪ್ಪಿನಂಗಡಿಯ 21 ವರ್ಷದ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತೆಯು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ಮತ್ತು ಆಶ್ರಯ ವ್ಯವಸ್ಥೆ ಮಾಡಿದ್ದಳು. ಗ್ಯಾಂಗ್ ಸದಸ್ಯರಿಗೆ ಮೊಬೈಲ್ ಫೋನ್ ನೀಡಿ ಹಣ ವರ್ಗಾವಣೆ ಮಾಡಿರುವ ಆರೋಪವೂ ಬಂಧಿತೆ ಶಫೀರಾ ಮೇಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ.
ಈ ಗರುಡ ಗ್ಯಾಂಗ್‌ನ ಸದಸ್ಯರು ಕೆಲ ದಿನಗಳ ಹಿಂದೆ ಉಡುಪಿ-ಮಣಿಪಾಲ ಹೆದ್ದಾರಿಯಲ್ಲಿ ರಸ್ತೆಗಿಳಿದು ಕೊಲೆಗೆ ಯತ್ನಿಸಿದ್ದರು. ನಗರದಲ್ಲಿ ತಡರಾತ್ರಿ ಕತ್ತಿ ಮತ್ತಿತರ ಆಯುಧಗಳೊಂದಿಗೆ ಬೀದಿ ಕಾಳಗ ನಡೆಸಿದ್ದರು.

Powered by Blogger.