".

Header Ads

ನಾಳೆ ಮಧ್ಯಾಹ್ನ 3 ಗಂಟೆಗೆ 'ದ್ವಿತೀಯ PUC ಪರೀಕ್ಷೆ-3'ರ ಫಲಿತಾಂಶ ಪ್ರಕಟ

 

ನಾಳೆ ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ( Second PUC Exam-3 Results ) ಫಲಿತಾಂಶವನ್ನು ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಇಲಾಖೆ ಘೋಷಣೆ ಮಾಡಿದೆ.

ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

ದಿನಾಂಕ 24-06-2024ರಿಂದ 05-07-2024ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3ರ ಪರೀಕ್ಷೆಗಳು ನಡೆದಿದ್ದವು. ಈ ಪರೀಕ್ಷೆಯ ಫಲಿತಾಂಶ ನಾಳೆ ಮಧ್ಯಾಹ್ನ ಪ್ರಕಟಿಸಲಾಗುತ್ತಿದೆ ಅಂತ ಹೇಳಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಹೀಗೆ ಚೆಕ್ ಮಾಡಿ

ಇನ್ನೂ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ತಾವು ಕುಳಿತಲ್ಲೇ ಅಂತರರ್ಜಾಲದ ಮೂಲಕ ವೀಕ್ಷಿಸಬಹುದಾಗಿದೆ.

ವಿದ್ಯಾರ್ಥಿಗಳು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ ಸೈಟ್https://karresults.nic.inಗೆ ಭೇಟಿ ನೀಡಿ, ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ದಾಖಲಿಸಿ ಪರಿಶೀಲಿಸಬಹುದಾಗಿದೆ.

Powered by Blogger.